Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ

Advertisement
Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  
ಕನ್ನಡ ರಾಜ್ಯೋತ್ಸವ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ.


 ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.


ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ https://kpp.karnataka.gov.in (ಆನ್‍ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.


ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚು ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ