Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದಕ ವಸ್ತು ಕಳ್ಳ ಸಾಗಣಿಕೆಯ 8.71 ಲಕ್ಷ ರೂ.ಮುಟ್ಟುಗೋಲು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ರಮವಾಗಿ ಮಾದಕ ವಸ್ತು ಕಳ್ಳ ಸಾಗಣಿಕೆಯಿಂದ ಆರೋಪಿ ಗಳಿಸಿದ್ದ 8.71 ಲಕ್ಷ ರೂ ಹಣವನ್ನು ಸಿಸಿಬಿ ಪೊಲೀಸರು ಮುಟ್ಟಗೋಲು ಹಾಕಿಕೊಂಡಿದ್ದಾರೆ. ಬೆಂಗಳೂರು ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿರುವ 32 ವರ್ಷದ ಅಮೀರ್ ಖಾನ್ ಜೈಲಿನಿಂದಲೇ ತನ್ನ ಮಾದಕ ದ್ರವ್ಯ ಜಾಲವನ್ನು ನಡೆಸುತ್ತಲೇ ಇದ್ದ ಎನ್ನಲಾಗಿದೆ.


ಒಂದು ವರ್ಷಕ್ಕೂ ಹೆಚ್ಚು ಕಾಲ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿ, ಆತನ ವಿರುದ್ಧ 2 ಪ್ರಕರಣಗಳು ದಾಖಲಾಗಿದ್ದು, ಸದ್ಯ ವಿಚಾರಣೆಯ ಹಂತದಲ್ಲಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಮಾದಕ ದ್ರವ್ಯಗಳನ್ನು ಎಲ್ಲಿಗೆ ತಲುಪಿಸಬೇಕು ಮತ್ತು ಯಾವ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಬೇಕು ಎಂಬುದರ ಕುರಿತು ಆರೋಪಿ ಖಾನ್ ಫೋನ್ ಮೂಲಕವೇ ಸೂಚನೆ ನೀಡಿ ವ್ಯಾಪಾರ ವಹಿವಾಟು ಮಾಡುತ್ತಿದ್ದ ಎಂದು  ಮಾರಾಟಗಾರರೊಬ್ಬರು ಬಹಿರಂಗಪಡಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST