Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಅವರಿಗೆ ಅದ್ಧೂರಿ ಸ್ವಾಗತ

Advertisement
ಚಂದ್ರವಳ್ಳಿ ನ್ಯೂಸ್, ಉಡುಪಿ:
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿದ್ದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮಕ್ಕೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಆಗಮಿಸಿದ್ದರು.
ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೀತೆ ಪಠಣ ಮಾಡಿದರು.


ಮೋದಿ ಅವರಿಗೆ ಅದ್ಧೂರಿ ಸ್ವಾಗತ-
ಉಡುಪಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರುವುದನ್ನು ಅರಿತಿದ್ದ ಸಾರ್ವಜನಿಕರು ಸಾಗರೋಪಾದಿಯಲ್ಲಿ ಆಗಿಮಿಸ್ದದರು. ಕಣ್ಣು ಹಾಯಿಸಿದಲ್ಲೆಲ್ಲ ಕೇಸರಿ ಧ್ವಜಗಳ ಹಾರಾಟ
, ರಸ್ತೆ ರಸ್ತೆಯಲ್ಲೂ ಹೂವಿನ ಮಳೆಯ ಸ್ವಾಗತ, ಅಭಿಮಾನಿಗಳಿಂದ ಜಯಘೋಷ ಮೊಳಗಿದ್ದು, ಕಾಣಿಸಿತು.


ಮಾಧ್ವ ಸಂಪ್ರದಾಯದಂತೆ ಹಣೆಗೆ ತಿಲಕವಿಟ್ಟು, ಕೊರಳಲ್ಲಿ ತುಳಸಿ ಮಣಿ ಮಾಲೆ, ನವಿಲು ಗರಿಯ ಪೇಟ ಧರಿಸಿದ್ದ ನರೇಂದ್ರ ಮೋದಿ, ಭಗವದ್ಗೀತೆಯ 15ನೇ ಅಧ್ಯಾಯದಲ್ಲಿರುವ ಪುರುಷೋತ್ತಮ ಯೋಗವನ್ನು ಪಠಿಸಿದರು.


ಲಕ್ಷ ಕಂಠದಲ್ಲಿ ಮೊಳಗಿದ ಗೀತಾ ಪಾರಾಯಣ ಮೈರೋಮಾಂಚನ ಗೊಳಿಸುವಂತಿತ್ತು. ಪುತ್ತಿಗೆ ಶ್ರೀಗಳು ಪ್ರಧಾನಿ ಮೋದಿಯನ್ನ ಸ್ವಾಗತಿಸುತ್ತಾ, ಸಂಸ್ಕೃತದಲ್ಲೇ ಹಾಡಿ ಹೊಗಳಿದರು.



ನರೇಂದ್ರ ಮೋದಿ ಅವರು ಸಾಕ್ಷಾತ್ ಅರ್ಜುನ. ಅರ್ಜುನನ ಅವತಾರ. ವಿಶ್ವದ ನಾಯಕ ಅಂತಾ ಸುಗುಣೇಂದ್ರ ಶ್ರೀಗಳು ಮೋದಿ ಅವರನ್ನ ಕೊಂಡಾಡಿದರು. ಇದೇ ಸಂದರ್ಭದಲ್ಲಿ ಶ್ರೀಗಳು ರಾಷ್ಟ್ರ ರಕ್ಷಣೆಯ ದೀಕ್ಷೆ ನೀಡಿ, ಘೋಷ ಮಂತ್ರಗಳೊಂದಿಗೆ ರಕ್ಷಾ ಕವಚವನ್ನು ತೊಡಿಸಿದರು.


ಲಕ್ಷ ಕಂಠ ಗೀತಾ ಪಾರಾಯಣ ಬಳಿಕ ಕನ್ನಡದಲ್ಲೇ ಮಾತು ಆರಂಭಿಸಿದ ಮೋದಿ, ಕೃಷ್ಣನೂರಿಗೆ ಬಂದಿದ್ದು ನನ್ನ ಪರಮ ಸೌಭಾಗ್ಯ. ಇವತ್ತು ಶ್ರೀಕೃಷ್ಣ, ಮಧ್ವಾಚಾರ್ಯರ ಆಶೀರ್ವಾದ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕಾಗಿ ಉಡುಪಿಗೆ ಆಗಮಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಗೆ ಅದ್ಧೂರಿ ಸ್ವಾಗತ ಸಿಕ್ಕಿತು.


ರೋಡ್ ಶೋ ಮೂಲಕ ಕೃಷ್ಣ ಮಠಕ್ಕೆ ಆಗಮಿಸಿದ ಮೋದಿಗೆ ರಸ್ತೆಯುದ್ಧಕ್ಕೂ ಹೂ ಮಳೆಯ ಸ್ವಾಗತ ಸಿಕ್ಕಿತು. ಹುಲಿವೇಷ ಕುಣಿತ, ವಿವಿಧ ಕಲಾ ತಂಡಗಳು ಮೋದಿಗೆ ಸ್ವಾಗತ ಕೋರಿದವು. ಶ್ರೀಕೃಷ್ಣ ಮಠದ ಮಹಾದ್ವಾರದಲ್ಲಿ ಮೋದಿಗೆ ಪೂರ್ಣ ಕುಂಭ ಸ್ವಾಗತ ದೊರೆಯಿತು. ಬಳಿಕ ಮಧ್ವ ಸರೋವರಕ್ಕೆ ತೆರಳಿದ ಮೋದಿ ತೀರ್ಥ ಪ್ರೋಕ್ಷಣೆ ಮಾಡಿ ಮಠದೊಳಗೆ ಪ್ರವೇಶಿಸಿದರು.

ಮೋದಿ ಅವರು ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದರ್ಶನ ಪಡೆದುಕೊಂಡರು.
ಆ ಬಳಿಕ ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ
50ನೇ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕನಕನ ಕಿಂಡಿಗೆ ಸ್ವರ್ಣ ಲೇಪನ ಮಾಡಲಾಗಿದ್ದು ಮೋದಿ ಅವರು ಉದ್ಘಾಟಿಸಿದರು.

ಚಿನ್ನ ಲೇಪಿತ ಕನಕನ ಕಿಂಡಿ ಮೂಲಕ ಮುಖ್ಯಪ್ರಾಣ ದೇವರು, ಗರುಡ ದೇವರ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.
ರೋಡ್​ ಶೋ ವೇಳೆ
, ವಿದ್ಯಾರ್ಥಿ ಪರೀಕ್ಷಿತ್ ಆಚಾರ್ ಎಂಬವರು ವಿಶೇಷ ರೀತಿಯಲ್ಲಿ ಮೋದಿ ಕುರಿತ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು. ಪರೀಕ್ಷಿತ್ ಅವರು ಕೈಯಾರೆ ಪ್ರಧಾನಿ ಮೋದಿ ಮತ್ತು ಅವರ ತಾಯಿಯವರ ಸುಂದರ ಭಾವಚಿತ್ರ ರಚಿಸಿ ತಂದಿದ್ದು ಗಮನ ಸೆಳೆಯಿತು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST