Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಪ್ರಭಾವಿ ಮಾಧ್ಯಮಗಳ ನಡುವೆ ಪುಸ್ತಕದ ಓದು ಅನನ್ಯ-ಮಂಜುಳಾ ಹುಲಿಕುಂಟೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಆಧುನಿಕ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಪುಸ್ತಕದ ಓದು ನೀಡುವ ಆತ್ಮೀಯ ಭಾವ ಅನನ್ಯವಾಗಿಯೇ ಉಳಿದಿದೆ ಎಂದು ಕವಯತ್ರಿ ಮಂಜುಳಾ ಹುಲಿಕುಂಟೆ ಹೇಳಿದರು.


ಇಲ್ಲಿನ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಅರಿವು ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ನಡೆದ ಸಾಹಿತ್ಯ ಚರ್ಚೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿಯ ಆಯಾಮಗಳು ಭಿನ್ನವಾಗಿರುತ್ತವೆ. ಸಮಕಾಲೀನ ಬರೆಹಗಾರರ ಬರೆಹಗಳು ಅವರನ್ನು ತಲುಪಬೇಕು. ಕೃತಕ ಬುದ್ದಿಮತ್ತೆಯ ಯುಗದಲ್ಲಿ ಸೃಜನಶೀಲತೆಯೂ ಸರಕಾಗುತ್ತಿದೆ. ಆದರೆ ಮನುಷ್ಯ ಸಂವೇದನೆಯನ್ನು ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವ ಕೆಲಸ ಆಗಬೇಕು. ಬದಲಾಗುತ್ತಿರುವ ಸಾಮಾಜಿಕ ಸಂದರ್ಭಗಳಲ್ಲಿ ಸಾಹಿತ್ಯದ ಪ್ರಭಾವ ಹಾಗೂ ಔಚಿತ್ಯದ ಕುರಿತು ಅಕಾಡೆಮಿಕ್‌ಆದ ಚರ್ಚೆಗಳು ಅಗತ್ಯ. ಎಲ್ಲ ಕಾಲಕ್ಕೂ ಸಲ್ಲುವ ಮತ್ತು ಎಲ್ಲರನ್ನೂ ಒಳಗೊಳ್ಳುವ ಚಿಂತನೆಗಳ ಬಗ್ಗೆ ಮರು ವಿಮರ್ಶೆ ಅಗತ್ಯವಿದೆ ಎಂದರು.

ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ಜತೆಗಾರ:
ಸಾಹಿತ್ಯ ಸಂವೇದನೆಯ ಒಳನೋಟಗಳ ಕುರಿತು ಮಾತನಾಡಿದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ರವಿಕಿರಣ್ ಕೆ.ಆರ್, ಸಾಹಿತ್ಯದ ಓದು ವ್ಯಕ್ತಿಯನ್ನು ಎಂದಿಗೂ ಏಕಾಂಗಿಯಾಗಿರಲು ಬಿಡುವುದಿಲ್ಲ. ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ನೈಜ ಜತೆಗಾರನಿದ್ದಂತೆ. ಭಾವನೆಗಳ ಅನನ್ಯತೆ ಅರಿತರೆ ಸಂಬಂಧಗಳ ಮಹತ್ವ ತಿಳಿಯುತ್ತದೆ. ಸಾಹಿತ್ಯ ಗತಕಾಲದ ಸರಕು ಮಾತ್ರವಾಗದೆ, ಸಮಾಜ ಹಾಗೂ ವರ್ತಮಾನದ ಕುರಿತ ಆಲೋಚನೆಗಳ ಜೊತೆಗೆ ಭವಿಷ್ಯದ ಬಗೆಗಿನ ಎಚ್ಚರಗಳನ್ನೂ ಒಳಗೊಂಡಿರುತ್ತದೆ ಎಂದರು.

ಯುವ ಮನಸ್ಸುಗಳಲ್ಲಿ ಮೂಡುವ ರಸಭಾವಗಳಿಗೆ ಅಕ್ಷರದ ರೂಪ ದೊರೆಯಬೇಕು. ಅನ್ನಿಸಿದ್ದನ್ನು ಹೇಳಿಬಿಡುವ ಮುಕ್ತತೆ ಸಾಹಿತಿಗೆ ಅಗತ್ಯ. ಕನ್ನಡದ ನಾಳೆಗಳ ಬಗ್ಗೆ ಚಿಂತಿಸುವ ಜತೆಗೆ ಸಶಕ್ತ ಚಿಂತನೆಗಳನ್ನು ಪ್ರಚೋದಿಸಿ, ಮಾನವೀಯ ಆಲೋಚನೆಗಳಿಗೆ ಮುಖಾಮುಖಿಯಾಗಿಸುವ ಪ್ರಕ್ರಿಯೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರವೀಣ್‌ತಳಗವಾರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಓದು ಮತ್ತು ಗ್ರಹಿಕೆಯ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಸಾಹಿತ್ಯಿಕ ಚರ್ಚೆಗಳು ಹೆಚ್ಚು ಮಹತ್ವ ಪಡೆದಿವೆ ಎಂದರು.

ಪ್ರಾಂಶುಪಾಲ ಪ್ರೊ.ಆರ್.ಎನ್.ಪಂಚಾಕ್ಷರಯ್ಯ ಅಧ್ಯಕ್ಷತೆ ವಹಿಸಿದ್ದರು. ಮಂಜುಳಾ ಹುಲಿಕುಂಟೆ ಹಾಗೂ ಪ್ರೊ.ಕೆ.ಆರ್.ರವಿಕಿರಣ್ ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು. ವಿದ್ಯಾರ್ಥಿಗಳೊಂದಿಗೆ ಸಾಹತ್ಯ ಸಂವಾದ ನಡೆಯಿತು. ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!