ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ವೇದಾವತಿ ನಗರದಲ್ಲಿರುವ ಆರ್.ಬಿ.ಎನ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಡಗರ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ 'ದಿವಂಗತ ಶಂಕರ್ ನಾಗ್ ಬಳಗ'ದ ವತಿಯಿಂದ ಭವ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಮತ್ತು ಕಲಾವಿದರು ಪ್ರಸ್ತುತಪಡಿಸಿದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನೆರೆದಿದ್ದವರ ಮನಸೂರೆಗೊಂಡವು.
ಈ ಸಂಭ್ರಮದ ಕಾರ್ಯಕ್ರಮದಲ್ಲಿ ಆರ್.ಬಿ.ಎನ್ ಶಾಲೆಯ ಅಧ್ಯಕ್ಷ ಖಂಡೇನಹಳ್ಳಿ ಜಿ.ಹನುಮಂತರಾಯಪ್ಪ, ಜವಗೊಂಡನಹಳ್ಳಿ ತಿಪ್ಪೇಸ್ವಾಮಿ, ಶಾಲೆಯ ಮುಖ್ಯೋಪಾಧ್ಯಾಯರು, ಸಮಸ್ತ ಶಿಕ್ಷಕ ವೃಂದದವರು ಹಾಗೂ ಶಾಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.




