ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆಯ ಕೆಟಿಜೆ ನಗರದ 8ನೇ ಕ್ರಾಸ್‌ನಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ಅಪಾರ ಪ್ರಮಾಣದ ಆಸ್ತಿ ಪಾಸ್ತಿಗೆ ನಷ್ಟವಾಗಿದೆ.
ಸ್ಫೋಟದ ತೀವ್ರತೆಗೆ ಪಕ್ಕದಲ್ಲಿದ್ದ ಗುಜರಿ ಅಂಗಡಿ, ಎರಡು ವಾಹನಗಳು ಮತ್ತು ಹತ್ತಿರದ ಮನೆಗಳಿಗೆ ಭಾರೀ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಪ್ರಾಣಾಪಾಯ ತಪ್ಪಿದ ಕ್ಷಣ: ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಜೀವ ಭಯದಿಂದ ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.
ಕಾರ್ಯಾಚರಣೆ: ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆ: ಟ್ರಾನ್ಸ್ಫಾರ್ಮರ್ ಸ್ಪೋಟಗೊಂಡ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಜನವಸತಿ ಪ್ರದೇಶಗಳಲ್ಲಿ ಹಳೆಯ ಮತ್ತು ಶಿಥಿಲಗೊಂಡಿರುವ ಟ್ರಾನ್ಸ್ಫಾರ್ಮರ್ಗಳನ್ನು ಕೂಡಲೇ ಬದಲಾಯಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.




