Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕಾವೇರಿ ಮಾತೆಗೆ ಒಗ್ಗಟ್ಟಿನ ಆರತಿ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಉದ್ಯಾನವನದಲ್ಲಿ ಆಯೋಜಿಸಲು ಉದ್ದೇಶಿಸಿರುವ ಕಾವೇರಿ ಆರತಿಗೆ ಸಂಬಂಧಿಸಿದಂತೆ ಸ್ಥಳೀಯ ರೈತರು, ಅಧಿಕಾರಿಗಳು ಹಾಗೂ ಪಾಲುದಾರರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯ ನಂತರ ಇದೇ ಸಂದರ್ಭದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಡಿಸಿಎಂ ಅವರು ಮಾತನಾಡಿದರು.


ಕಾವೇರಿ ಆರತಿಯಿಂದ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ. ಎಲ್ಲರನ್ನೂ ಸಮಾನವಾಗಿ ಪೊರೆಯುವ ಕಾವೇರಿ ಮಾತೆಗೆ ನಾವೆಲ್ಲರೂ ಪ್ರಾರ್ಥನೆ ಸಲ್ಲಿಸಲಿದ್ದೇವೆ. ಪ್ರಯತ್ನ ವಿಫಲವಾಗಬಹುದು,‌ ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ; ಮನಸ್ಸಿದ್ದಲ್ಲಿ ಮಾರ್ಗವಿದೆ, ಭಕ್ತಿ ಇದ್ದಲ್ಲಿ ಭಗವಂತನಿರುತ್ತಾನೆ ಎಂಬ ನಂಬಿಕೆ ನನಗಿದೆ ಎಂದು ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ರೈತರಿಗಿದ್ದ ಎಲ್ಲಾ ಗೊಂದಲಗಳನ್ನು ಬಗೆಹರಿಸಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕಾವೇರಿ ಆರತಿ ಮಾಡುತ್ತಿದ್ದೇವೆ. ಸ್ಥಳೀಯ ಪ್ರತಿನಿಧಿಗಳೂ ನಮಗೆ ಬೆಂಬಲವಾಗಿದ್ದಾರೆ. ಕಾವೇರಿ ಆರತಿಯಿಂದ ಡ್ಯಾಂಗೆ ಯಾವುದೇ ತೊಂದರೆಯಾಗುವುದಿಲ್ಲ. ವಿವಿಧ ಸಂಸ್ಕೃತಿಗಳ ಅನಾವರಣ, ಸಾವಿರಾರು ಉದ್ಯೋಗಗಳ ಸೃಷ್ಟಿ, ಪ್ರವಾಸೋದ್ಯಮದ ಅಭಿವೃದ್ಧಿ, ವ್ಯಾಪಾರ-ವಹಿವಾಟುಗಳ ವೃದ್ಧಿಯಾಗಲಿದೆ. ಕಾವೇರಿ ಮಾತೆಗೆ ನಾವೆಲ್ಲರೂ ಒಗ್ಗಟ್ಟಾಗಿ ದಸರಾದ ವೇಳೆ ವಿಜೃಂಭಣೆಯ ಆರತಿಯನ್ನು ಮಾಡಲಿದ್ದೇವೆ ಎಂದು ತಿಳಿಸಿದರು.

ಸ್ಯಾಂಕಿ ಟ್ಯಾಂಕ್‌ನಲ್ಲಿ ನಡೆದ ಕಾವೇರಿ ಆರತಿಗೆ ಜನರಿಂದ ಉತ್ತಮ ಸ್ಪಂದನೆ ದೊರಕಿದೆ. ವಿವಿಧ ಇಲಾಖೆಗಳ ಸಮನ್ವಯತೆ ಹಾಗೂ ಅನುದಾನದೊಂದಿಗೆ ಕೆಆ‌ರ್‌ಎಸ್‌ನಲ್ಲಿ ವೈಭವದ ಆರತಿಯನ್ನು ಮಾಡಲಾಗುವುದು. ಅಧ್ಯಯನ ತಂಡವೊಂದು ಉತ್ತರ ಭಾರತದ ಪ್ರವಾಸ ಮಾಡಿ, ಗಂಗಾ ಆರತಿಯನ್ನು ವೀಕ್ಷಿಸಿ, ವರದಿಯನ್ನೂ ನೀಡಿದ್ದಾರೆ. ಆ ವರದಿಯನ್ವಯ ಕಾವೇರಿ ಆರತಿಯ ಕುರಿತಂತೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!