ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರಸಭೆಯ 1, 2, 3 ಮತ್ತು 4 ನೇ ವಾರ್ಡ್ ಮಟ್ಟದ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಅಬ್ದುಲ್ ಸರ್ದಾರ್ ಅವರು ನೇಮಕಗೊಂಡಿದ್ದಾರೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ರಘುಮೂರ್ತಿ ಹಾಗೂ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ನೂತನವಾಗಿ ಆಯ್ಕೆಯಾದ ಅಬ್ದುಲ್ ಸರ್ದಾರ್ ಅವರಿಗೆ ಅಧಿಕೃತ ಆದೇಶ ಪತ್ರವನ್ನು ಹಸ್ತಾಂತರಿಸಿ, ಶುಭ ಹಾರೈಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಇತರ ಹಿರಿಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದು, ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಸರ್ಕಾರದ ಐದು ಮುಖ್ಯ ಗ್ಯಾರೆಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ವಾರ್ಡ್ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವುದಾಗಿ ಅಬ್ದುಲ್ ಸರ್ದಾರ್ ಈ ವೇಳೆ ತಿಳಿಸಿದರು.




