Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಶುದ್ಧ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ ರೂ.60 ಕೋಟಿ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ಪೋರ್ಸ್ ಸಮಿತಿಯಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. ಅಗತ್ಯಬಿದ್ದರೆ ಮಾತ್ರ ಬೋರ್ವೆಲ್ಗಳನ್ನು ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್ವೆಲ್ ಕೊರೆದು ವೆಚ್ಚ ಮಾಡಬಾರದು ಎಂದು  ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ವಾಡಿಕೆಗಿಂತ ಶೇ.55ರಷ್ಟು ಮಾನ್ಸೂನ್ ಪೂರ್ವ ಹೆಚ್ಚು ಮಳೆಯಾಗಿದೆ. ವಾಡಿಕೆಗಿಂತ ಯಾವುದೇ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿಲ್ಲ. 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲಾ ಜಲಾಶಯಗಳಲ್ಲಿ ಶೇ.50 ರಿಂದ ಶೇ.60ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ. ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್ ವಿಳಂಬವಾದರೆ 6319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.

 ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ 3 ಸಾವಿರ ಖಾಸಗಿ ಬೋರ್ವೆಲ್ಗಳನ್ನು ಗುರುತಿಸಲಾಗಿದ್ದು, 480 ಬೋರ್ವೆಲ್ಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.  ಸಮಸ್ಯೆ ಶುರುವಾಗುವ ಮೊದಲೇ ಸಭೆ ನಡೆಸಿ ಸಮರೋಪಾದಿ ಸಿದ್ಧತೆ  ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಬಿ-ಖಾತಾ, -ಖಾತಾವನ್ನು ಅಧಿಕಾರಿಗಳು ಸಮರ್ಪಕವಾಗಿ ಮಾಡಬೇಕು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರತಿ ದಿನವೂ ಒಂದು ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭಾಗಿಯಾಗಿದ್ದರು.

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!