Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೊಲೀಸ್ ನೇಮಕಾತಿ ಪರೀಕ್ಷೆ ಕೆ.ಇ.ಎ ಮಾರ್ಗಸೂಚಿಗಳ ಪಾಲನೆ ಕಡ್ಡಾಯ-ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್  ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು  ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ

 ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ
2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ  ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ.

ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು.

ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.

ಪರೀಕ್ಷಾ ವೇಳಾಪಟ್ಟಿ ಬಗ್ಗೆ ಅಭ್ಯರ್ಥಿಗಳಿಗೆ ನಿಗಾ ಇರಲಿ:
ನಗರದಲ್ಲಿ
26 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 9,592 ಅಭ್ಯರ್ಥಿಗಳು ಪರೀಕ್ಷೆ ಹಾಜರಾಗಲಿದ್ದಾರೆ. ಹೈದ್ರಾಬಾದ್ ಕರ್ನಾಟಕ ಹೊರತು ಪಡಿಸಿದ ಅಭ್ಯರ್ಥಿಗಳು ಮಾತ್ರ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಪರೀಕ್ಷೆ ನಡೆಯಲಿದೆ.

ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ 1 ಗಂಟೆ ಮುಂಚೆಯೇ ತಪಾಸಣೆ ಒಳಪಟ್ಟು ಪರೀಕ್ಷಾ ಕೊಠಡಿ ತೆರಳಬೇಕು. ಬೆಳಿಗ್ಗೆ 10 ಗಂಟೆಯಿಂದ 10:15 ನಿಮಿಷದವರಗೆ ಮೇಲ್ವಿಚಾರಕರು ಪ್ರವೇಶ ಹಾಗೂ ಗುರುತಿನ ಚೀಟಿ ಪರಿಶೀಲನೆ ನಡೆಸುತ್ತಾರೆ. ಅಭ್ಯರ್ಥಿಗಳಿಗೆ ಓ.ಎಂ.ಆರ್ ವಿತರಣೆ ಮಾಡುತ್ತಾರೆ. ಅಭ್ಯರ್ಥಿಗಳು ಓ.ಎಂ.ಆರ್ ನಲ್ಲಿ ಮುದ್ರಿತವಾಗಿರುವ ನೊಂದಣಿ ಸಂಖ್ಯೆಯನ್ನು, ತಮ್ಮ ಪರೀಕ್ಷಾ ಪತ್ರದಲ್ಲಿನ ನೊಂದಣಿ ಸಂಖ್ಯೆಯೊಂದಿಗೆ ಹೋಲಿಸಿ ನೋಡಿ, ಸರಿ ಎಂದು ಕಂಡುಬಂದಲ್ಲಿ, ಎಚ್ಚರಿಕೆಯಿಂದ ಓ.ಎಂ.ಆರ್. ಭರ್ತಿ ಮಾಡಬೇಕು.

ಕೊಠಡಿ ಮೇಲ್ವಿಚಾರಕರು ನಾಮೀನಲ್ ಮುದ್ರಿತವಾಗಿರುವ ಅಭ್ಯರ್ಥಿಗಳ ವಿವರ ಪರಿಶೀಲಿಸುತ್ತಾರೆ. ಬೆಳಗ್ಗೆ 10:20ರ ಸುಮಾರಿಗೆ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸೀಲ್ ಮಾಡಿರುವ ಪ್ರಶ್ನೆ ಪತ್ರಿಕೆಯ ಬಂಡಲ್ ಹೊಡೆದು, ಪ್ರಶ್ನೆ ಪತ್ರಿಕೆಗಳನ್ನು ವಿತರಣೆ ಮಾಡಲಾಗುತ್ತದೆ. ಯಾವುದೇ ಅಭ್ಯರ್ಥಿಗಳು 10:30ಕ್ಕಿ ಮುಂಚಿತವಾಗಿ ಪ್ರಶ್ನೆ ಪತ್ರಿಕೆಯ ಸೀಲ್ ತೆರೆಯುವಂತಿಲ್ಲ. ಸರಿಯಾಗಿ 10:30 ಪತ್ರಿಕೆಯನ್ನು ತೆರೆದು ಉತ್ತರಿಸಬಹುದು. ಪರೀಕ್ಷಾ ಅವಧಿ ಮಧ್ಯಾಹ್ನ 12:00 ಗಂಟೆ ಸರಿಯಾಗಿ ಮುಕ್ತಾಯವಾಗುತ್ತದೆ.

ಈ ಬಾರಿಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪ್ರಶ್ನೆಗಳಿಗೆ ಉತ್ತರಿಸಲು ನಾಲ್ಕು ವೃತ್ತಗಳಲ್ಲಿ ಒಂದನ್ನು ಭರ್ತಿ ಮಾಡಬೇಕು. ಇದರ ಜೊತೆಗೆ ಉತ್ತರಗಳು ಗೊತ್ತಿರದ ಪ್ರಶ್ನೆಗಳಿಗೆ ಐದನೇ ವೃತ್ತವನ್ನು ಕಡ್ಡಾಯಾವಗಿ ಭರ್ತಿ ಮಾಡಬೇಕು. ಇದಕ್ಕಾಗಿ ಪರೀಕ್ಷಾ ಅವಧಿ ಮಧ್ಯಾಹ್ನ 12:00 ಗಂಟೆ ಸರಿಯಾಗಿ ಮುಕ್ತಾಯವಾದ ನಂತರ 5 ನಿಮಿಷದ ಹೆಚ್ಚುವರಿ ಸಮಯವನ್ನು ಅಭ್ಯರ್ಥಿಗಳಿಗೆ ನೀಡಲಾಗುವುದು. ನಂತರ ಕೊಠಡಿ ಮೇಲ್ವಿಚಾರಕರು ಓ.ಎಂ.ಆರ್.ಗಳನ್ನು ಸಂಗ್ರಹಿಸುತ್ತಾರೆ. ಗೊತ್ತಿರದ ಪ್ರಶ್ನೆಗಳಿಗೆ ಐದನೇ ವೃತ್ತವನ್ನು ಭರ್ತಿ ಮಾಡದೇ ಹೊದರೆ, ಅಂತಹ ಪ್ರಶ್ನೆಗೆ 0.25(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಪರೀಕ್ಷಾ ಕೇಂದ್ರಗಳ ಪರಿಶೀಲನೆ:
ಪೊಲೀಸ್ ಇಲಾಖೆಯಲ್ಲಿನ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಇದೇ ಆಗಸ್ಟ್
02ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಶನಿವಾರ ಚಿತ್ರದುರ್ಗ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಚಿನ್ಮೋಲಾದ್ರಿ ಪದವಿಪೂರ್ವ ಕಾಲೇಜು, ನಮ್ಮ ಎಕ್ಸ್‍ಪರ್ಟ್ ಪದವಿಪೂರ್ವ ಕಾಲೇಜು, ಎಸ್‍ಜೆಎಂಐಟಿ ಪದವಿಪೂರ್ವ ಕಾಲೇಜು, ಎಂ.ಕೆ.ಹಟ್ಟಿ ಎಸ್‍ಜೆಎಂ ಪದವಿಪೂರ್ವ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷೆಯನ್ನು ಸುವ್ಯವಸ್ಥೆಯಿಂದ ನಡೆಸುವುದಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಆಗಸ್ಟ್ 02ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ರವರೆಗೆ ಚಿತ್ರದುರ್ಗ ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು,  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ಪ್ರಭಾರಿ ಪಿ.ಯು. ಉಪನಿರ್ದೇಶಕ ಅಶೋಕ್, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಮಾರ್ಗಧಿಕಾರಿಗಳು, ವಸ್ತ್ರಸಂಹಿತೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!