Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೊಕಿನ ತೂಬಗೆರೆ ಹೋಬಳಿ ಶಿರವಾರ ಗ್ರಾಮದಲ್ಲಿ ಕೃಷಿ ವ್ಯವಹಾರ ನಿರ್ವಹಣೆ ಸಂಸ್ಥೆ  ( ಜಿ ಕೆ ವಿ ಕೆ) ಬೆಂಗಳೂರು ವತಿಯಿಂದ ಗ್ರಾಮೀಣ ಕೃಷಿ ಕೆಲಸದ ಅನುಭವ ಕಾರ್ಯಕ್ರಮದ ಅಂಗವಾಗಿ ಶಿರವಾರ ಗ್ರಾಮದಲ್ಲಿ ರೈತರಿಗೆ  ಕಿಸಾನ್ ಕ್ರೆಡಿಟ್ ಕಾರ್ಡ್ (  ಕಿಸಾನ್ ಕ್ರೆಡಿಟ್ ಕಾರ್ಡ್) ಕುರಿತು ಮಾಹಿತಿ ನೀಡುವ ಕಾರ್ಯಕ್ರಮವನ್ನು ಸೆಪ್ಟೆಂಬರ್ 07ರಂದು ಶಿರವಾರ ಗ್ರಾಮದ ಡೈರಿ ಸಮೀಪದಲ್ಲಿ ಆಯೋಜಿಸಲಾಯಿತು.

 ಕಾರ್ಯಕ್ರಮದಲ್ಲಿ 4ನೇ ವರ್ಷದ  ಐ ಎ ಬಿ ಎಂ ವಿದ್ಯಾರ್ಥಿ ಕು. ಲಕ್ಕೇಶ್ ಅವರು ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹಸಿ ಕುರಿತು ಸಮಗ್ರ ಮಾಹಿತಿಯನ್ನು ಸರಳವಾಗಿ ವಿವರಿಸಿದರು.ಕೆಸಿಸಿ  ಎಂದರೇನು, ಯಾರು ಕೆ ಸಿ ಸಿ ಪಡೆಯಬಹುದು, ಕಿಸಾನ್ ಕ್ರೆಡಿಟ್ ಕಾರ್ಡ್  ಗೆ ಹೇಗೆ ಅರ್ಜಿ ಸಲ್ಲಿಸಬೇಕು, ಸಾಲದ ಬಡ್ಡಿದರ, ಅರ್ಜಿ ಸಲ್ಲಿಸುವ ವಿಧಾನ, ರೈತರಿಗೆ ದೊರೆಯುವ ಸಾಲದ ಮೊತ್ತ, ಡೆಬಿಟ್ ಕಾರ್ಡ್ ಸೌಲಭ್ಯ ಹಾಗೂ ಸಾಲ ಮರುಪಾವತಿ ಅವಧಿ ಕುರಿತು ವಿವರವಾಗಿ ಮಾಹಿತಿ ನೀಡಲಾಯಿತು.

Advertisement

 ಕೆ ಸಿ ಸಿ. ಮೂಲಕ ರೈತರಿಗೆ ದೊರೆಯುವ ವಿವಿಧ ಪ್ರಯೋಜನಗಳು, ಸಾಲವನ್ನು ಯಾವ ಸಂದರ್ಭದಲ್ಲಿ ಬಳಸಬಹುದು ಮತ್ತು ಯಾವ ಯಾವ ಬ್ಯಾಂಕ್‌ಗಳಲ್ಲಿ  ಸೌಲಭ್ಯ ಲಭ್ಯವಿದೆ ಎಂಬುದರ ಬಗ್ಗೆಯೂ ತಿಳಿಸಲಾಯಿತು. ರೈತರು ಕೇಳಿದ ವಿವಿಧ ಪ್ರಶ್ನೆಗಳಿಗೆ ಲಕ್ಕೇಶ್ ಅವರು ಸಮರ್ಪಕವಾಗಿ ಉತ್ತರ ನೀಡಿದರು.

ಕಾರ್ಯಕ್ರಮದಲ್ಲಿ ಸುಮಾರು 48 ರೈತರು ಭಾಗವಹಿಸಿ ಕೆಸಿಸಿ ಕುರಿತು ಮಾಹಿತಿ ಪಡೆದುಕೊಂಡರು. ರೈತರು ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ನೀಡುವುದರ ಜೊತೆಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಸಹಕಾರ ನೀಡಿದರು.

ಕೃಷಿ ಕ್ಷೇತ್ರದಲ್ಲಿ ರೈತರಿಗೆ ಅಗತ್ಯವಿರುವ ಬ್ಯಾಂಕಿಂಗ್ ಮತ್ತು ಸಾಲ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ರೈತರಿಗೆ ಬಹಳ ಉಪಯುಕ್ತವಾಗಿವೆ ಎಂದು ತಿಳಿಸಲಾಯಿತು.

ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ ಜಿಕೆವಿಕೆ ವಿಶ್ವವಿದ್ಯಾಲಯ, ಗ್ರಾಮೀಣ ಕೃಷಿ ಕೆಲಸದ ಅನುಭವ ಪ್ರಾಧ್ಯಾಪಕರಾದ ಡಾll ಸವಿತಾ  ಹಾಗೂ ಶಿರವಾರ ಗ್ರಾಮದ ಎಲ್ಲಾ ರೈತರಿಗೆ ಐ ಎ ಬಿ ಎಂ & ಜಿಕೆವಿಕೆ ವಿದ್ಯಾರ್ಥಿಗಳ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಈ ಕಾರ್ಯ ಕ್ರಮದಲ್ಲಿ ಜಿಕೆವಿಕೆ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಶಿರವಾರ ಗ್ರಾಮದ ರೈತರು ಹಾಜರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌