LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಅಧಿಕಾರಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ: ಮುಖ್ಯಮಂತ್ರಿ ಶಿವಕುಮಾರ್‌

Advertisement
Advertisement

 ಚಂದ್ರವಳ್ಳಿ ನ್ಯೂಸ್ ​ಬೆಂಗಳೂರು:
ಯುವಜನತೆ ಮತ್ತು ವಿದ್ಯಾರ್ಥಿಗಳ ಹಿತರಕ್ಷಣೆಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು
, ಕೃಷಿ ಅಧಿಕಾರಿಗಳ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

​ಆಗಸ್ಟ್‌ 4 ರಂದು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ತಮ್ಮ ಅಳಲನ್ನು ತೋಡಿಕೊಂಡಿದ್ದರು. ವಿದ್ಯಾರ್ಥಿಗಳ ಆತಂಕ ಮತ್ತು ನೋವಿಗೆ ತಕ್ಷಣವೇ ಸ್ಪಂದಿಸಿದ ಸರ್ಕಾರ, ಕೃಷಿ ಪದವೀಧರರಿಗೆ ಅನ್ಯಾಯವಾಗದಂತೆ ಈ ಮುಖ್ಯ ನಿರ್ಧಾರವನ್ನು ತೆಗೆದುಕೊಂಡಿದೆ.

​ಹಿಂದಿನ ಸರ್ಕಾರದ ತಪ್ಪಿನಿಂದ ಅತಂತ್ರ:
ಹಿಂದಿನ ಬಿಜೆಪಿ ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳು ಹಾಗೂ ದೋಷಪೂರಿತ ನಿಯಮಗಳ ತಿದ್ದುಪಡಿಯಿಂದಾಗಿ ರಾಜ್ಯದ ಕೃಷಿ ಪದವೀಧರರ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ. ಈ ಹಿಂದೆ ನಡೆದ ತಪ್ಪನ್ನು ಶೀಘ್ರವೇ ಸರಿಪಡಿಸಲು ಸೂಕ್ತ ಮತ್ತು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

​ವಿದ್ಯಾರ್ಥಿಗಳಿಗೆ ಅಭಯ:
"ನಮ್ಮದು ಯುವಜನರ ಧ್ವನಿಗೆ ಮಿಡಿಯುವ ಸರ್ಕಾರ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ಸಿಗಲಿದೆ. ಅವರ ಕನಸುಗಳನ್ನು ನನಸಾಗಿಸುವುದು ಹಾಗೂ ಉಜ್ವಲ ಭವಿಷ್ಯವನ್ನು ಕಟ್ಟುವುದು ನಮ್ಮ ಸರ್ಕಾರದ ಜವಾಬ್ದಾರಿ. ಕೃಷಿ ಪದವೀಧರರಿಗೆ ಯಾವುದೇ ಕಾರಣಕ್ಕೂ ಕಿಂಚಿತ್ತೂ ಅನ್ಯಾಯವಾಗದಂತೆ ಪರೀಕ್ಷೆ ನಡೆಸಲು ದೃಢಸಂಕಲ್ಪ ಮಾಡಿದ್ದೇವೆ" ಎಂದು ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಯರಿಗೆ ಬುದ್ದನ ಕಂಚಿನ ವಿಗ್ರಹಗಳ ವಿತರಣೆನೂತನ ಸಚಿವ ಟಿ.ರಘುಮೂರ್ತಿವರಿಗೆ ಹೂವಿನ ಮಳೆ ಸುರಿಸಿ ಸ್ವಾಗತಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆನಾಪಿ ಕುಸಿತ: ವಿದ್ಯುತ್‌ ಇಲ್ಲದೆ, ಸೊಳ್ಳೆಗಳ ಕಾಟಕ್ಕೆ ಕತ್ತಲಲ್ಲಿ ಬಾಣಂತಿಯರ ಪರದಾಟ!ಹೂಗಳಿಂದ ಅರಳಿದೆ ಗಂಗರ ಸಾಮ್ರಾಜ್ಯದ ಇತಿಹಾಸ: ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂಸಿಎಂ ಶಿವಕುಮಾರ್‌ ಭೇಟಿಯಾದ ಸರ್ಕಾರಿ ಮಹಿಳಾ ನೌಕರರ ನಿಯೋಗ: ಸ್ವಚ್ಛ ಇಂಧನ ಕ್ರಾಂತಿಗೆ ಉಕ್ಕು ಬೆನ್ನೆಲುಬು: ಅಂತಾರಾಷ್ಟ್ರೀಯ ಇಂಧನ ಸಮ್ಮೇಳನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಪಾದನೆ ಸರ್ಕಾರದ ವೈಫಲ್ಯಗಳ ವಿರುದ್ಧ ಎನ್‌ಡಿಎ ಕಾದಾಟ: ಕುಮಾರಸ್ವಾಮಿ-ಬೊಮ್ಮಾಯಿ, ಅಶೋಕ್ ಸಮಾಲೋಚನೆಪ್ರಮಾಣ ವಚನ ಮುಗಿದು 3 ದಿನವಾದರೂ ಖಾತೆ ಹಂಚಿಕೆಯಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿಕೆಪಿಎಸ್‌ಸಿ ಭ್ರಷ್ಟಾಚಾರದ ಕೂಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ಸಚಿವ ಸ್ಥಾನ ‘ಪೇಮೆಂಟ್ ಸೀಟ್’: ಸಿ.ಟಿ. ರವಿ ಗಂಭೀರ ಆರೋಪ