E-PAPER
22 Nov 2026, 02:30:23 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಅಮಿತ್ ಶಾ ಭೇಟಿಯಾದ ಕುಮಾರಸ್ವಾಮಿ, ವಿಜಯೇಂದ್ರ: ಹಿರಿಯೂರು ಉಪಚುನಾವಣೆ ಚರ್ಚೆ?

ಚಂದ್ರವಳ್ಳಿ ನ್ಯೂಸ್, ಹೊಸದಿಲ್ಲಿ:
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಒಂದೇ ದಿನ ಪ್ರತ್ಯೇಕವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಭೇಟಿಯ ಬಳಿಕ ಇಬ್ಬರೂ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯ ರಾಜಕೀಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆದಿದೆ ಎಂದು ವರದಿಯಾಗಿದೆ. ಈ ಪ್ರತ್ಯೇಕ ಭೇಟಿಗಳ ಹಿಂದೆ ಪ್ರಮುಖವಾಗಿ ಎರಡು ರಾಜಕೀಯ ಕಾರಣಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಹಿರಿಯೂರು ಉಪಚುನಾವಣೆ ಟಿಕೆಟ್ ಪೈಪೋಟಿ: ಇತ್ತೀಚಿನ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದಿಂದ ಉತ್ಸಾಹಗೊಂಡಿರುವ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಗೆ ಸಜ್ಜಾಗುತ್ತಿವೆ.

ಈ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ಸಮಬಲದ ಪೈಪೋಟಿ ಇರುವುದರಿಂದ, ಎನ್‌ಡಿಎ ಟಿಕೆಟ್‌ಗಾಗಿ ಎರಡೂ ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಅಭ್ಯರ್ಥಿ ಆಯ್ಕೆ ವಿಚಾರವನ್ನು ನೇರವಾಗಿ ಹೈಕಮಾಂಡ್ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ಕುಮಾರಸ್ವಾಮಿ ಮತ್ತು ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಮೈತ್ರಿ ಧರ್ಮವನ್ನು ಮುಂದುವರಿಸಿಕೊಂಡು ಹೋಗುವಂತೆ ಅಮಿತ್ ಶಾ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯಾಧ್ಯಕ್ಷರು ಮತ್ತು ವಿಪಕ್ಷ ನಾಯಕರ ಬದಲಾವಣೆಯ ಕುರಿತು ಪಕ್ಷದೊಳಗೆ ಚರ್ಚೆಗಳು ಕೇಳಿಬರುತ್ತಿವೆ. ಮುಂಬರುವ ವಿಧಾನಸಭಾ ಚುನಾವಣೆಯವರೆಗೂ ತಮ್ಮನ್ನೇ ರಾಜ್ಯಾಧ್ಯಕ್ಷರಾಗಿ ಮುಂದುವರಿಸುವಂತೆ ವಿಜಯೇಂದ್ರ ಅವರು ವರಿಷ್ಠರ ಬಳಿ ಮನವಿ ಮಾಡಿರಬಹುದು ಎಂದು ರಾಜಕೀಯ ವಲಯದಲ್ಲಿ ಅಂದಾಜಿಸಲಾಗಿದೆ.

ಒಟ್ಟಾರೆಯಾಗಿ, ಇಬ್ಬರೂ ನಾಯಕರ ಅಹವಾಲುಗಳನ್ನು ಆಲಿಸಿರುವ ಅಮಿತ್ ಶಾ ಅವರು, ತಮ್ಮದೇ ಮೂಲಗಳಿಂದ ವರದಿ ತರಿಸಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪುಸ್ತಕ ಪ್ರೀತಿ ಪ್ರತಿಯೊಬ್ಬರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ ಆಗಲಿದೆ : ಟಿ.ಸಿ.ಸುದೀಪಹಾಡೋನಹಳ್ಳಿ ಕೆ ವಿ ಕೆ ವತಿಯಿಂದ ಪ್ರಾತ್ಯಕ್ಷಿಕೆ ಕ್ಷೇತ್ರೋತ್ಸವಹಣಕಾಸು ಸಾಕ್ಷರತ ಜಾಗೃತಿ ಕಾರ್ಯಕ್ರಮಕಾಲೇಜು ಆವರಣದಿಂದಲೇ ವೈದ್ಯಕೀಯ ವಿದ್ಯಾರ್ಥಿನಿಯ ಅಪಹರಣ; ವಿಡಿಯೋ ವೈರಲ್ಅರ್ಹ ರೈತರಿಗೆ ತಕ್ಷಣ 5,000 ರೂ. ತಲುಪಿಸಲು ಡಿಸಿಎಂ ಪರಮೇಶ್ವರ್ ಖಡಕ್ ಸೂಚನೆಕಾವೇರಿ ವಿವಾದ: ತಮಿಳುನಾಡಿಗೆ ಸುಪ್ರೀಂನಲ್ಲಿ ಭಾರಿ ಹಿನ್ನಡೆ, ಕರ್ನಾಟಕಕ್ಕೆ ಕಾನೂನು ಜಯಸುಪ್ರೀಂನಲ್ಲಿ ತಮಿಳುನಾಡಿಗೆ ಮುಖಭಂಗ: ಆದರೂ ಕರ್ನಾಟಕಕ್ಕೆ ಕಾವೇರಿ ನೀರು ಹರಿಸಲು CWRC ಸೂಚನೆ!ಅಮಿತ್ ಶಾ ಭೇಟಿಯಾದ ಕುಮಾರಸ್ವಾಮಿ, ವಿಜಯೇಂದ್ರ: ಹಿರಿಯೂರು ಉಪಚುನಾವಣೆ ಚರ್ಚೆ?ದಾಂಪತ್ಯದ ಸಣ್ಣಪುಟ್ಟ ಜಗಳಗಳು ‘ಕ್ರೌರ್ಯ’ವಲ್ಲ: 18 ದಿನಕ್ಕೇ ವಿಚ್ಛೇದನ ಕೇಳಿದ್ದ ಪತಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಪತ್ನಿಯನ್ನೇ ಕೊಂದು ಚೀಲದಲ್ಲಿ ತುಂಬಿಟ್ಟಿದ್ದ ಎರಡನೇ ಪತಿ ಅರೆಸ್ಟ್!