Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆನಂದ್ ಸಿ. ತಿರುಮಲಗೆ ಪ್ರತಿಷ್ಠಿತ 'ಸಾಧಕ ರತ್ನ ಪ್ರಶಸ್ತಿ' ಪ್ರದಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ನೇಹ ಸೌರಭ ಸಾಂಸ್ಕೃತಿಕ ವೇದಿಕೆ ವತಿಯಿಂದ ನಗರದ ನಕ್ಷತ್ರ ಆಡಿಟೋರಿಯಂ, ಮಹಾಲಕ್ಷ್ಮಿ ಪುರಂನಲ್ಲಿ ಆಯೋಜಿಸಿದ್ದ ಅದ್ದೂರಿ ಸಮಾರಂಭದಲ್ಲಿ ಶಿಕ್ಷಣ, ಸಮಾಜಸೇವೆ ಹಾಗೂ ಯುವಜನರ ಸಬಲೀಕರಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ ರಾಜ್ಯ ಪ್ರಶಸ್ತಿ ವಿಜೇತ ಆನಂದ್ ಸಿ. ತಿರುಮಲ ಅವರಿಗೆ ಪ್ರತಿಷ್ಠಿತ "ಸಾಧಕ ರತ್ನ ಪ್ರಶಸ್ತಿ" ಪ್ರದಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟಿ ಅಭಿನಯ ಹಾಗೂ ಶಶಿಧರ್ ಕೋಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಅವರು ಆನಂದ್ ಸಿ. ತಿರುಮಲ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆ, ಸಮಾಜಮುಖಿ ಕಾರ್ಯಗಳು ಹಾಗೂ ಯುವ ಸಮುದಾಯಕ್ಕೆ ನೀಡುತ್ತಿರುವ ಮಾರ್ಗದರ್ಶನವನ್ನು ಶ್ಲಾಘಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಕೋಂಗಿ ವಹಿಸಿದ್ದರು. 

ಮುಖ್ಯ ಅತಿಥಿಗಳಾಗಿ ಹಾಸ್ಯ ಕಲಾವಿದ ವೈದ್ಯನಾಥ್ ಬಿರಿದಾರ್,  ಹನುಮಂತಪ್ಪ ಎಸ್. ಮೇಡೇಗಾರ್ ಹಾಗೂ ಡಾ. ಆರ್ನವಿ ಕಾಂಚನ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಆನಂದ್ ಸಿ. ತಿರುಮಲ ಅವರ ಶಿಕ್ಷಣ ಸೇವೆ, ಸಮಾಜಮುಖಿ ಚಟುವಟಿಕೆಗಳು ಹಾಗೂ ಯುವಜನರಲ್ಲಿ ನಾಯಕತ್ವ ಬೆಳೆಸುವ ಕಾರ್ಯವನ್ನು ಪ್ರಶಂಸಿಸಿ ಅಭಿನಂದಿಸಿದರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಆನಂದ್ ಸಿ. ತಿರುಮಲ, ಈ ಗೌರವವು ತಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿಯೂ ಶಿಕ್ಷಣ, ಸಮಾಜಸೇವೆ ಹಾಗೂ ಯುವಜನರ ಸರ್ವತೋಮುಖ ಅಭಿವೃದ್ಧಿಗಾಗಿ ಇನ್ನಷ್ಟು ಸಮರ್ಪಣೆಯಿಂದ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಹಲವಾರು ಸಾಧಕರನ್ನು "ಸಾಧಕ ರತ್ನ ಪ್ರಶಸ್ತಿ" ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಾಹಿತಿಗಳು, ಕಲಾವಿದರು, ಸಮಾಜಸೇವಕರು, ಶಿಕ್ಷಣ ತಜ್ಞರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

ಕಾರ್ಯಕ್ರಮವನ್ನು ಸ್ನೇಹ ಸೌರಭ ಸಾಂಸ್ಕೃತಿಕ ವೇದಿಕೆ ಆಯೋಜಿಸಿತ್ತು. ವೇದಿಕೆಯ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಕೋಂಗಿ ಅಧ್ಯಕ್ಷತೆ ವಹಿಸಿದ್ದು, ಡಾ. ಕೃಷ್ಣ ಟಿ. ಕಾರ್ಯಕ್ರಮದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದರು. ದೇವೇಂದ್ರ ಆಚಾರ್ ಹಾಗೂ ಮಂಜುನಾಥ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಡಾ. ವೆಂಕಟೇಶ್ ಆರ್. ಚೌತಾಯಿ ಅಚ್ಚುಕಟ್ಟಾಗಿ ನಿರ್ವಹಿಸಿದರು.

ಸಮಾರಂಭವು ಸಾಧಕರ ಸಾಧನೆಯನ್ನು ಗೌರವಿಸುವುದರ ಜೊತೆಗೆ ಸಮಾಜದಲ್ಲಿ ಶಿಕ್ಷಣದ ಮಹತ್ವ, ಸೇವಾ ಮನೋಭಾವ ಹಾಗೂ ಸಕಾರಾತ್ಮಕ ಚಿಂತನೆಯನ್ನು ಉತ್ತೇಜಿಸುವ ಸಂದೇಶವನ್ನು ಸಾರಿತು. ವಿವಿಧ ಕ್ಷೇತ್ರಗಳ ಸಾಧಕರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ ಮೂಲಕ ಸಮಾಜಕ್ಕೆ ಮಾದರಿಯಾದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!