Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೊಂದು ಮೈಲಿಗಲ್ಲು ಸಾಧಿಸಿದ ಶಕ್ತಿ ಯೋಜನೆ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯು International Book of Records  - World Record of Excellence ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.

ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ, ಜೂನ್‌11, 2023 ರಿಂದ ಜುಲೈ 25, 2025ರ ಅವಧಿಯಲ್ಲಿ ಸಾರಿಗೆ ನಿಗಮದ ಬಸ್ಸುಗಳಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಸಾಧನೆಗಾಗಿ ಶಕ್ತಿ ಯೋಜನೆಯು ಈಗಾಗಲೇ ಪ್ರತಿಷ್ಠಿತ "Golden Book of World Records" ನಲ್ಲಿ ದಾಖಲಾಗಿದೆ. ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ವಿಶ್ವ ದಾಖಲೆ ಬರೆದಿದೆ ಎಂದು ಸಿಎಂ ತಿಳಿಸಿದರು.

ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದು, ಇದರಿಂದ ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ. ಸ್ತ್ರೀ ಸಬಲೀಕರಣದ ಮಹತ್ವದ ಹೆಜ್ಜೆಯಲ್ಲಿ ನಮ್ಮೊಂದಿಗೆ ಜೊತೆಯಾಗಿರುವ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯ ಸಾಧನೆಯ ಶ್ರೇಯ ಸಲ್ಲುತ್ತದೆ.

ಸಾರಿಗೆ ಸಚಿವರಾದ ಆರ್.ರಾಮಲಿಂಗಾರೆಡ್ಡಿ,ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST