Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಚುನಾವಣೆ ಪೂರ್ವದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯ ಸೇರಿ ಎಲ್ಲರಿಗೂ ನ್ಯಾಯ ಕೊಡುವುದಾಗಿ ಹಾಗೂ ಅಭಿವೃದ್ಧಿ ಮಾಡುವುದಾಗಿ ಕಾಂಗ್ರೆಸ್ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಓಲೈಕೆ ರಾಜಕಾರಣಕ್ಕೆ ಕಟ್ಟುಬಿದ್ದು ಪರಿಶಿಷ್ಟರಿಗೆ ದ್ರೋಹ ಬಗೆದಿದೆ.ಈ ನಿಟ್ಟಿನಲ್ಲಿ ರಾಜ್ಯದ ಎಸ್‍ಸಿ, ಎಸ್‍ಟಿ ಸಮುದಾಯಗಳ ಹಣವನ್ನು ದುರುಪಯೋಗ ಮಾಡುವ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ 14 ತಂಡಗಳನ್ನು ರಚಿಸಿ ಜನಾಂದೋಲನ ರೂಪಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ನ್ಯಾಯ ಒದಗಿಸುವ ವರೆಗೆ ಬಿಜೆಪಿ ಹೋರಾಟ ನಿರಂತರವಾಗಿ ನಡೆಸಲಿದೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ರಾಜ್ಯ ಉಪಾಧ್ಯಕ್ಷರಾದ  ಬೈರತಿ ಬಸವರಾಜ್, ಹಾಲಪ್ಪಶಾಸಕರಾದ ಎಸ್.ಆರ್.ವಿಶ್ವನಾಥ್,  ಮಾನಪ್ಪ ವಜ್ಜಲ್, ಉದಯ್ ಗರುಡಾಚಾರ್, ರಘು, ಸಿಮೆಂಟ್ ಮಂಜು, ಶ್ರೀಮತಿ ಭಗೀರತಿ ಮರುಳ್ಯ, ಶಾಸಕರು ಹಾಗೂ ಜಿಲ್ಲಾಧ್ಯಕ್ಷರಾದ  ಸಿ.ಕೆ.ರಾಮಮೂರ್ತಿ, ಪ್ರಕೋಷ್ಠಗಳ ಸಂಯೋಜಕರಾದ ದತ್ತಾತ್ರಿ, ಜಿಲ್ಲಾಧ್ಯಕ್ಷ ಎಸ್.ಶ್ರೀ ಹರೀಶ್, ಸಪ್ತಗಿರಿ ಗೌಡ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!