Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾವೇರಿ ನೀರು ಹರಿಸುವ ಕುರಿತ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ತಿಯು ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಉಲ್ಲಂಘಿಸಿ ನೇರವಾಗಿ ನ್ಯಾಯಾಲಯದ ಮೊರೆಹೋದರೆ ಅರ್ಜಿ ತಿರಸ್ಕೃತಗೊಳ್ಳುವ ಅಪಾಯವಿರುತ್ತದೆ. ಹೀಗಾಗಿ ಕಾನೂನು ತಜ್ಞರ ಸಲಹೆಯಂತೆ ಸೋಮವಾರದವರೆಗೆ ತಮಿಳುನಾಡಿಗೆ ನೀರು ಹರಿಸುವುದು ಅನಿವಾರ್ಯವಾಗಿದೆ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ತೀವ್ರ ನೀರಿನ ಕೊರತೆ ಇದ್ದರೂ, ಒಕ್ಕೂಟ ವ್ಯವಸ್ಥೆಯ ಚೌಕಟ್ಟಿನಲ್ಲಿ ನ್ಯಾಯಾಲಯದ ಆದೇಶಗಳನ್ನು ಗೌರವಿಸಬೇಕಾದ ಅನಿವಾರ್ಯ ಇಕ್ಕಟ್ಟಿಗೆ ಸರ್ಕಾರ ಸಿಲುಕಿದೆ ಎಂದರು.

Advertisement

ಕಳೆದ 20 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಬಿಡುಗಡೆ: ಕಳೆದ ಇಪ್ಪತ್ತು ವರ್ಷಗಳ ಇತಿಹಾಸದಲ್ಲೇ ಈ ಬಾರಿ ಅತ್ಯಂತ ಕಡಿಮೆ ಪ್ರಮಾಣದ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಈ ಹಿಂದೆ ಇದೇ ರೀತಿಯ ಕಠಿಣ ಪರಿಸ್ಥಿತಿ ಎದುರಾದಾಗಲೂ 35 ಟಿಎಂಸಿವರೆಗೆ ನೀರು ಬಿಟ್ಟಿರುವ ಉದಾಹರಣೆಗಳಿವೆ. ಸರ್ಕಾರ ಸದಾ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು, ನಮ್ಮ ಅಧಿಕಾರಿಗಳು ಮತ್ತು ಕಾನೂನು ತಂಡ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸುತ್ತಿದೆ ಎಂದು ಸಚಿವರು ಭರವಸೆ ನೀಡಿದರು.

ಪ್ರಸ್ತುತ ರೈತರ ಬೆಳೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಪೂರೈಸಲಾಗುತ್ತಿದ್ದು, ಕೆರೆಗಳನ್ನು ತುಂಬಿಸುವ ಕಾರ್ಯವೂ ಭರಾಟೆಯಿಂದ ಸಾಗಿದೆ. ಮುಂದಿನ ಡಿಸೆಂಬರ್‌ನಿಂದ ಜೂನ್‌ವರೆಗೆ ಸಾರ್ವಜನಿಕರ ಕುಡಿಯುವ ನೀರಿನ ಅಗತ್ಯಕ್ಕೆ ಯಾವುದೇ ಕೊರತೆಯಾಗದಂತೆ ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಪ್ರಮುಖ ಜಲಾಶಯಗಳಲ್ಲಿ ಸಾಕಷ್ಟು ನೀರನ್ನು ಕಾಯ್ದಿರಿಸಲಾಗುವುದು ಎಂದು ಅವರು ತಿಳಿಸಿದರು.

ಕೇಂದ್ರದ ಅನುಮೋದನೆ ಸಿಕ್ಕರೆ ಶಾಶ್ವತ ಪರಿಹಾರ:
ಕಾವೇರಿ ವಿಚಾರದಲ್ಲಿ ಪ್ರತಿಪಕ್ಷಗಳೊಂದಿಗೆ ರಾಜಕೀಯ ಕೆಸರೆರಚಾಟ ನಡೆಸಲು ಸರ್ಕಾರ ಇಚ್ಛಿಸುವುದಿಲ್ಲ ಎಂದ ಸಚಿವರು, ರಾಜ್ಯದ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುಮತಿ ಕೊಡಿಸಲು ಪ್ರಾಮಾಣಿಕವಾಗಿ ಮುಂದಾದರೆ ನಾಡಿನ ಜನತೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದರು.

ಮೇಕೆದಾಟು ಯೋಜನೆ ಸಂಬಂಧ ಈಗಾಗಲೇ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು.

ಇದೇ ವೇಳೆ, ರಾಜ್ಯದಲ್ಲಿ ಕೈಗೊಂಡಿರುವ ಮೋಡ ಬಿತ್ತನೆ ಕಾರ್ಯವು ಆರಂಭಿಕ ಹಂತದಲ್ಲಿ ನಿರೀಕ್ಷಿತ ಫಲಿತಾಂಶ ನೀಡಿಲ್ಲವಾದರೂ, ಹಬ್ಬದ ನಂತರದ ದಿನಗಳಲ್ಲಿ ವಾತಾವರಣ ಅನುಕೂಲಕರವಾಗಿ ಉತ್ತಮ ಫಲಿತಾಂಶ ನೀಡುವ ನಿರೀಕ್ಷೆಯಿದೆ ಎಂದರು.

ಸತೀಶ್ ಜಾರಕಿಹೊಳಿ ಮೇಲಿನ ಆರೋಪಗಳು ಸುಳ್ಳೆಂದು ಸಾಬೀತಾಗಲಿವೆ: ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ನಡೆದ ಇಡಿ ದಾಳಿ ಕುರಿತು ಮಾತನಾಡಿದ ಅವರು, ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಐಟಿ ಮತ್ತು ಇಡಿ ದಾಳಿಗಳು ಸಾಮಾನ್ಯ ಸಂಗತಿಯಾಗಿಬಿಟ್ಟಿವೆ ಎಂದರು.

ಸಚಿವ ಸತೀಶ್ ಜಾರಕಿಹೊಳಿ ಅವರು ಈಗಾಗಲೇ ತಮ್ಮ ವ್ಯಾಪಾರ-ವಹಿವಾಟಿನ ಕುರಿತು ಸ್ಪಷ್ಟನೆ ನೀಡಿದ್ದಾರೆ. ಕಾನೂನು ಹೋರಾಟದ ಮೂಲಕ ಅವರ ಮೇಲಿನ ಆರೋಪಗಳು ಸುಳ್ಳು ಎಂದು ಸಾಬೀತಾಗಿ, ಅವರು ಶೀಘ್ರದಲ್ಲೇ ನಿರಪರಾಧಿಯಾಗಿ ಹೊರಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ನೀರು ಹರಿಸುವ ಕುರಿತ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಇಡಿ ದಾಳಿಯಲ್ಲಿ ಸಿಕ್ಕ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವಲ್ಲ; ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆಚಹಾ ಕಪ್ ರಸ್ತೆ ಬದಿ ಎಸೆದಿದ್ದನ್ನು ಪ್ರಶ್ನಿಸಿದ ಪೌರಕಾರ್ಮಿಕನ ಮೇಲೆ ಹಲ್ಲೆನಕಲಿ ಔಷಧ ಜಾಲ; ಏಕಕಾಲಕ್ಕೆ ಎಸ್‌ಐಟಿ ದಾಳಿ, ಕೋಟ್ಯಂತರ ಮೌಲ್ಯದ ಔಷಧ ಜಪ್ತಿ2028ರ ಚುನಾವಣೆ ಸ್ಪರ್ಧೆ ನಿರಾಕರಣೆ ಹೇಳಿಕೆ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತುರಸ್ತೆ ಗುಂಡಿ ಮುಚ್ಚಲು ಜೆಟ್ ಪ್ಯಾಚರ್: ಸಚಿವ ಕೃಷ್ಣಭೈರೇಗೌಡ ಚಾಲನೆಸಿಕ್ಕಿರುವುದು ನಮ್ಮದೇ ಹಣ, ಕಾನೂನು ಮೂಲಕ ವಾಪಸ್ ಪಡೆಯುತ್ತೇವೆ: ಸಚಿವ ಸತೀಶ್ ಜಾರಕಿಹೊಳಿನವೆಂಬರ್ 1ರೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್ಇ.ಡಿ ದಾಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲವಿದೇಶದಲ್ಲಿ ಹೂಡಿಕೆ ಸುಳ್ಳು, ಕುಟುಂಬದ ಹೆಸರು ಕೆಡಿಸಬೇಡಿ: ಬಾಲಚಂದ್ರ ಜಾರಕಿಹೊಳಿ