ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಅಥವಾ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ 2026ರ ಅಕ್ಟೋಬರ್ 28 ರಿಂದ ನವೆಂಬರ್ 30 ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಸ್ವಾವಲಂಬಿ ಸಾರಥಿ ಯೋಜನೆ), ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳಿಗಾಗಿ ಅರ್ಜಿಗ ಆಹ್ವಾನಿಸಲಾಗಿದೆ.
2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ ಮತ್ತು ಹಿಂದಿನ ಸಾಲಿನ ಅರ್ಜಿಗಳನ್ನೇ ಸೇರಿಸಿ ಪರಿಗಣಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.




