ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2026-27 ನೇ ಸಾಲಿನ ಸಾಮಾನ್ಯ/ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ Sevasindhu.karnataka.gov.in ಮುಖಾಂತರ ಜುಲೈ 22 ರಿಂದ ಆಗಸ್ಟ್ 20 ರವರೆಗೆ ಸಲ್ಲಿಸಬಹುದಾಗಿದೆ. ಅರ್ಜಿಗೆ ಸಂಬಂಧಪಟ್ಟ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್: www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-24410574 /080-22213530/9986837037/080-22241325 ಗೆ ಹಾಗೂ ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾಸಿಂಧು ಇವರನ್ನು ಸಂಪರ್ಕಿಸಬಹುದಾಗಿದೆ. ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಡಾ.ಬಿ ಎಸ್ ಮಂಜುನಾಥ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



