ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಜಿಲ್ಲೆಯ ಪ್ರತಿಭಾವಂತ ಒಕ್ಕಲಿಗ ಮತ್ತು ಕುಂಚಿಟಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಹರು.
ಅಭ್ಯರ್ಥಿಗಳು ಕಡ್ಡಾಯವಾಗಿ ಒಕ್ಕಲಿಗ ಅಥವಾ ಕುಂಚಿಟಿಗ ಸಮುದಾಯಕ್ಕೆ ಸೇರಿದವರಾಗಿರಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:
ವಿದ್ಯಾರ್ಥಿಗಳು ಸ್ವಯಂ ದೃಢೀಕೃತ ಅರ್ಜಿಯೊಂದಿಗೆ ಈ ಕೆಳಗಿನ ದಾಖಲೆಗಳನ್ನು ಲಗತ್ತಿಸಬೇಕು.
ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ/ ವರ್ಗಾವಣೆ ಪತ್ರ, ಎರಡು ಭಾವಚಿತ್ರಗಳು, ಅರ್ಜಿಯಲ್ಲಿ ವಿದ್ಯಾರ್ಥಿಯ ಹೆಸರು, ಪೋಷಕರ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಸಕ್ತ ವಿದ್ಯಾರ್ಥಿಗಳು ದಿನಾಂಕ 20-05-2026ರ ಒಳಗಾಗಿ ತಮ್ಮ ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆಯ ಮೂಲಕ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕೆಂದು ಜಿಲ್ಲಾ ಒಕ್ಕಲಿಗ ಸಂಘದ ಕಾರ್ಯದರ್ಶಿ ಎಸ್. ಜಗನ್ನಾಥ್ ಕೋರಿದ್ದಾರೆ. ನಿಗದಿತ ಸಮಯದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ವಿಳಾಸ: ಚಿತ್ರದುರ್ಗ ಜಿಲ್ಲಾ ಒಕ್ಕಲಿಗರ ಸಂಘ (ರಿ.), ಬಿ.ಡಿ. ರಸ್ತೆ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಎದುರು, ಚಿತ್ರದುರ್ಗ - 577501.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಹೆಚ್ಚಿನ ವಿವರಗಳಿಗಾಗಿ ಸಂಘದ ಪದಾಧಿಕಾರಿಗಳಾದ ಎಸ್. ಈರಣ್ಣ (ಗೌರವಾಧ್ಯಕ್ಷ-9448567131), ಜಿ.ಪಿ. ಚೇತನ್ (ಅಧ್ಯಕ್ಷ-9141777779) ಅಥವಾ ಎಸ್. ಜಗನ್ನಾಥ್ (ಪ್ರಧಾನ ಕಾರ್ಯದರ್ಶಿ-9448697045), ಮಾಜಿ ಅಧ್ಯಕ್ಷ ಜಿ.ಹನುಮಂತಪ್ಪ 9980278204 ಇವರನ್ನು ಸಂಪರ್ಕಿಸಬಹುದಾಗಿದೆ.


