Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಾಯಕ ಪ್ರಾಧ್ಯಾಪಕ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯ ಐಟಿಇಪಿ ಬಿಎಸ್‍ಸಿ, ಬಿಇಡಿ ಕೋರ್ಸ್‍ಗಾಗಿ ಶೈಕ್ಷಣಿಕ ಅಧ್ಯಯನ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 179 ದಿವಸಗಳ ಅವಧಿಗೆ ಮೀರದಂತೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅಧ್ಯಯನ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಶಿಕ್ಷಣ ವಿಭಾಗದಲ್ಲಿ  ಎಂ.ಎಡ್ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಟ ಶೇ. 55 ಅಂಕಗಳನ್ನು ಗಳಿಸಿರಬೇಕು. ಎನ್‍ಇಟಿ ಅಥವಾ ಕೆಸೆಟ್ ಅರ್ಹತಾ ಪರೀಕ್ಷೆ ಅಥವಾ ಶಿಕ್ಷಣ ವಿಭಾಗದಲ್ಲಿ ಪಿಹೆಚ್‍ಡಿ ಅಥವಾ ಇತರೆ ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಈ ವರ್ಗಗಳಿಗೆ ವಿಶ್ವವಿದ್ಯಾಲಯ ಆಯೋಗವು ಸೂಚಿಸಿದ ಇತರೆ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು. ಮನೋವಿಜ್ಞಾನ ಅಥವಾ ತತ್ವಶಾಸ್ತ್ರ, ಸಮಾಜಶಾಸ್ತ್ರ ಅಥವಾ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಮಾಸಿಕ ವೇತನ ರೂ. 35000/- ಮಾತ್ರ ನೀಡಲಾಗುವುದು.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳು ಹಾಗೂ ಮೂಲದಾಖಲೆಗಳ ಎರಡು ಜೆರಾಕ್ಸ್ ಪ್ರತಿಗಳು ಮತ್ತು ಎರಡು ಭಾವಚಿತ್ರಗಳನ್ನು ಅರ್ಜಿ ನಮೂನೆಯೊಂದಿಗೆ ಸೆಪ್ಟೆಂಬರ್ 27ರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಸಂದರ್ಶನಕ್ಕೆ ಹಾಜರಾಗುವುದು. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು.


ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗುವುದು. ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ನೇಮಕಾತಿಯು ತಾತ್ಕಾಲಿಕವಾಗಿರುವುದರಿಂದ ಯಾವುದೇ ಸಮಯದಲ್ಲಿ ಯಾವುದೇ ಕಾರಣ ತಿಳಿಸದೇ ಕರ್ತವ್ಯದಿಂದ ತೆಗೆದು ಹಾಕುವ ಅಧಿಕಾರ ನೃಪತುಂಗ ವಿಶ್ವವಿದ್ಯಾಲಯಕ್ಕೆ ಇರುವುದು ಹಾಗೂ ನೇರ ನೇಮಕಾತಿಗಾಗಿ ಯಾವುದೇ ತರಹದ ಹಕ್ಕಿಗೆ ಒಳಪಟ್ಟಿರುವುದಿಲ್ಲ ಎಂದು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST