Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಅಂತರರಾಷ್ಟ್ರೀಯ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪನೆಗೆ ಅನುಮೋದನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ
, ಅಂತರರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ಸ್ಥಾಪಿಸಲು ಸರ್ಕಾರ ತಾಂತ್ರಿಕ ಅನುಮೋದನೆ ನೀಡಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ತಿಳಿಸಿದ್ದಾರೆ.

 ವಿಧಾನ ಪರಿಷತ್ತಿನ ಕಲಾಪದ ವೇಳೆ, ಪರಿಷತ್ ಸದಸ್ಯರಾದ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಸುಮಾರು 141.50 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಈ ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣವಾಗಲಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಕ್ರಾಸ್ ಬಳಿ ತೋಟಗಾರಿಕೆ ಇಲಾಖೆಯಿಂದ ಹಸ್ತಾಂತರಗೊಂಡ ಸುಮಾರು 20 ಎಕರೆ ಜಮೀನಿನಲ್ಲಿ ಈ ಮಾರುಕಟ್ಟೆ ತಲೆಎತ್ತಲಿದೆ. ನಬಾರ್ಡ್ (RIDF-31) ಯೋಜನೆಯಡಿ 20.00 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ, ಚರಂಡಿ, ನೀರು ಸರಬರಾಜು, ವಿದ್ಯುದ್ದೀಕರಣ, ಹರಾಜು ಕಟ್ಟೆ ಮತ್ತು ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ.

ಮಾರುಕಟ್ಟೆ ಆವರಣದಲ್ಲಿ ಹೂವುಗಳ ಸಂರಕ್ಷಣೆಗಾಗಿ ಶೈತ್ಯಾಗಾರ (ಕೋಲ್ಡ್ ಸ್ಟೋರೇಜ್) ಸ್ಥಾಪನೆಗೆ ಸ್ಥಳಾವಕಾಶ ಕಲ್ಪಿಸಲಾಗಿದ್ದು, ಮುಂದಿನ ಹಂತದ ಕಾಮಗಾರಿಗಳಲ್ಲಿ ಇದಕ್ಕೆ ಆದ್ಯತೆ ನೀಡಲಾಗುವುದು. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಮಗಳು-2004ರ ಅನ್ವಯ, ಎಪಿಎಂಸಿ ಆವರಣದಲ್ಲಿ ಶೈತ್ಯಾಗಾರ ಸ್ಥಾಪಿಸಲು ಆಸಕ್ತಿ ಹೊಂದಿರುವ ಖಾಸಗಿ ಉದ್ಯಮಿಗಳು, ವರ್ತಕರು ಅಥವಾ ಸಂಘ ಸಂಸ್ಥೆಗಳಿಗೆ ನಿವೇಶನ ದರದಲ್ಲಿ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಜಾಗ ಹಂಚಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆಯು ಜಿಲ್ಲೆಯ ರೈತರಿಗೆ ಮತ್ತು ಹೂವು ಬೆಳೆಗಾರರಿಗೆ ತಮ್ಮ ಉತ್ಪನ್ನಗಳಿಗೆ ಜಾಗತಿಕ ಮಟ್ಟದ ಮಾರುಕಟ್ಟೆ ಮತ್ತು ಯೋಗ್ಯ ಬೆಲೆ ಒದಗಿಸಲು ಸಹಕಾರಿಯಾಗಲಿದೆ ಎಂದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!