Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎನ್‌ಎಂಡಿಸಿ ಉದ್ಯೋಗಿಗಳ ವೇತನ ಪರಿಷ್ಕರಣೆಗೆ ಅನುಮೋದನೆ: ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಭಾರತೀಯ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ ಕಾರ್ಮಿಕರ ಮತ್ತು ಕಾರ್ಯನಿರ್ವಾಹಕರೇತರ ನೌಕರರ ಶ್ರಮವನ್ನು ಗುರುತಿಸುವ ನಿಟ್ಟಿನಲ್ಲಿ 2022-2026ರ ಅವಧಿಗೆ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

​ಪರಿಷ್ಕೃತ ವೇತನ ಶ್ರೇಣಿಯ ಪ್ರಕಾರ, ಎಲ್ಲಾ ದರ್ಜೆಯ ನೌಕರರ ಕನಿಷ್ಠ ಮೂಲ ವೇತನವನ್ನು 18,10023,500 ರಿಂದ 26,95035,000 ಕ್ಕೆ ಏರಿಸಲಾಗಿದ್ದು, ಶೇಕಡಾ 49 ರಷ್ಟು ಗಣನೀಯ ಹೆಚ್ಚಳವಾಗಿದೆ. ಅಲ್ಲದೆ, ಗರಿಷ್ಠ ವೇತನ ಶ್ರೇಣಿಯನ್ನು 31,85041,320 ರಿಂದ 65,64085,190 ಕ್ಕೆ ಹೆಚ್ಚಿಸಲಾಗಿದ್ದು, ಇದು ದುಪ್ಪಟ್ಟಿಗಿಂತಲೂ ಅಧಿಕವಾಗಿದೆ.

​ಈ ನೂತನ ಪರಿಷ್ಕರಣೆಯು ಶೇ. 100 ರಷ್ಟು ಕ್ಷೇಮಾಭಿವೃದ್ಧಿ ಭತ್ಯೆ  ಹಾಗೂ ಶೇ. 15 ರಷ್ಟು ಕನಿಷ್ಠ ಗ್ಯಾರಂಟಿ ಸೌಲಭ್ಯವನ್ನು ಒಳಗೊಂಡಿದೆ. ಭಾರತದ ಖನಿಜ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಕಾರ್ಮಿಕರ ಕಲ್ಯಾಣ ಮತ್ತು ಗೌರವಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ.

​ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 'ವಿಕಸಿತ ಭಾರತ'ದ ಕನಸನ್ನು ನನಸು ಮಾಡಲು ಶ್ರಮಿಸುತ್ತಿರುವ ಭಾರತದ ಶ್ರಮಶಕ್ತಿಯನ್ನು ಬಲಪಡಿಸಲು ನಾವು ಸದಾ ಶ್ರಮಿಸುತ್ತೇವೆ. ಎನ್‌ಎಂಡಿಸಿಯ ಎಲ್ಲಾ ನೌಕರರಿಗೆ ಹಾಗೂ ಅವರ ಕುಟುಂಬದವರಿಗೆ ನನ್ನ ಶುಭ ಹಾರೈಕೆಗಳು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!