ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆ
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆಯ ಕಚೇರಿಯಲ್ಲಿ ಆಯುಧ ಪೂಜೆಯನ್ನು ಅತ್ಯಂತ ವಿಶೇಷವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು.
ಪೂಜಾ ಮಹೋತ್ಸವದ ಅಂಗವಾಗಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗೌರಿ ಪೂಜೆ, ಶ್ರೀ ಮಂಜುನಾಥ ಸ್ವಾಮಿ ಪೂಜೆ ಹಾಗೂ ಗಣಪತಿ ಹೋಮವನ್ನು ನೆರವೇರಿಸಲಾಯಿತು. ಪೂಜೆಯ ನಂತರ ಆಗಮಿಸಿದ್ದ ಭಕ್ತಾದಿಗಳಿಗೆ ಮತ್ತು ಸಿಬ್ಬಂದಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ರವಿ ಹಿತ್ತಲಮನಿ, ಎಮ್ಐಎಸ್ಮನು ಕುಮಾರ್, ಪಿಎಸ್ಐ ಶಶಿಕಲಾ, ನಳಿನ, ರವೀಂದ್ರನಾಥ್, ಚಮನ್ ಶರೀಫ್, ಹುಚ್ಚವನಹಳ್ಳಿ ಪ್ರಸನ್ನ, ತಿಪ್ಪಮ್ಮ ನಾಗರಾಜ್, ಕಿರಣ್, ಶಾಂತಕುಮಾರ್ ಹಾಗೂ ಕಚೇರಿಯ ಎಲ್ಲಾ ಸಿಬ್ಬಂದಿಯವರು ಸಕ್ರಿಯವಾಗಿ ಭಾಗವಹಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.



