Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರು-ಮಡಗಾಂವ್‌ವಂದೇ ಭಾರತ್ ರೈಲು ವಿಸ್ತರಣೆ: ಹೆಚ್.ಡಿ. ಕುಮಾರಸ್ವಾಮಿ

 ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಬೆಂಗಳೂರು ಹಾಗೂ ಗೋವಾ (ಮಡಗಾಂವ್) ನಡುವೆ ಹಾಸನ
, ಮಂಗಳೂರು, ಉಡುಪಿ ಮತ್ತು ಕಾರವಾರ ಮಾರ್ಗವಾಗಿ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸೇವೆ ವಿಸ್ತರಿಸಲಾಗಿದ್ದು, ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಮನವಿಗೆ ಕೇಂದ್ರ ರೈಲ್ವೆ ಸಚಿವಾಲಯ ಸಕಾರಾತ್ಮಕವಾಗಿ ಸ್ಪಂದಿಸಿದೆ.

​ಹೆಚ್ಚುತ್ತಿರುವ ಪ್ರಯಾಣಿಕರ ಸಂದಣಿ, ಪ್ರವಾಸೋದ್ಯಮ, ಧಾರ್ಮಿಕ ಯಾತ್ರೆ, ಶಿಕ್ಷಣ ಹಾಗೂ ವಾಣಿಜ್ಯ ಕ್ಷೇತ್ರಗಳ ಅಗತ್ಯತೆಯನ್ನು ಪರಿಗಣಿಸಿ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಿಸುವಂತೆ ಹೆಚ್.ಡಿ. ಕುಮಾರಸ್ವಾಮಿ ಮನವಿ ಸಲ್ಲಿಸಿದ್ದರು. ಈ ಮನವಿಗೆ ತಕ್ಷಣ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

Advertisement

​ಪ್ರಸ್ತುತ ಚಾಲನೆಯಲ್ಲಿರುವ ಮಡಗಾಂವ್-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಈಗ ಹಾಸನ, ಉಡುಪಿ ಹಾಗೂ ಕಾರವಾರ ಮಾರ್ಗವಾಗಿ ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ. ಈ ರೈಲು ಪರಿಷ್ಕೃತ ವೇಳಾಪಟ್ಟಿಯೊಂದಿಗೆ 'ರೈಲು ಸಂಖ್ಯೆ 26655/26656 ಯಶವಂತಪುರ-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್' ಆಗಿ ಸಂಚಾರ ನಡೆಸಲಿದೆ.

​ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರಾವಳಿ ಕರ್ನಾಟಕ, ಬೆಂಗಳೂರು ಮತ್ತು ಗೋವಾ ನಡುವಿನ ಸಂಪರ್ಕವನ್ನು ಮತ್ತಷ್ಟು ಗಟ್ಟಿಗೊಳಿಸಲು ಇದು ಪ್ರಮುಖ ಹೆಜ್ಜೆಯಾಗಿದೆ. ಈ ನೂತನ ರೈಲು ಸೇವೆಯಿಂದ ಪ್ರಯಾಣಿಕರಿಗೆ ಅನುಕೂಲವಾಗುವುದಲ್ಲದೆ ಪ್ರಾದೇಶಿಕ ಆರ್ಥಿಕತೆ, ಪ್ರವಾಸೋದ್ಯಮ ಹಾಗೂ ಅಂತಾರಾಜ್ಯ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಭಟನೆ ಹತ್ತಿಕ್ಕುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವಿಜಯನಗರದ ಮಹಾನವಮಿ; ಸಾಮ್ರಾಜ್ಯದ ವೈಭವದಿಂದ ಶ್ರೀರಂಗಪಟ್ಟಣ ದಸರಾವರೆಗೆ:ಮೂರ್ಖನಾದ ಮಹಾರಾಜನ್ : ವೆಂಕಟೇಶ್, ಚಿತ್ರದುರ್ಗಚಳ್ಳಕೆರೆಯಲ್ಲಿ ಇಂದು 'ಮಾತೃಶ್ರೀ ಪ್ರಸಾದ ನಿಲಯ' ಉದ್ಘಾಟನೆಕಾಶಿಯಲ್ಲಿ ವಿಶ್ವ ಕನ್ನಡ ಕಲಾ ಸಂಸ್ಥೆಯ ಸಾಂಸ್ಕೃತಿಕ ಸಂಭ್ರಮ: 30 ಪ್ರವಾಸಿಗರಿಗೆ ‘ಕನ್ನಡ ಸೇವಾ ರತ್ನ’ ಪ್ರಶಸ್ತಿ ಪ್ರದಾನವಿಜೃಂಭಣೆಯ 'ರೈತ ಸ್ವಾಭಿಮಾನ ಯಾತ್ರೆ': ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಾದಯಾತ್ರೆ ನಡೆಸಿದ ನಿಖಿಲ್ಕವಿತೆ ಬರೆಯುವುದು, ಸಾಹಿತಿಯಾಗುವುದು ಲೋಕದ ಜವಾಬ್ದಾರಿ: ಸಾಹಿತಿ ಬಂಜಗೆರೆ ಜಯಪ್ರಕಾಶ್ತುಮಕೂರು ದಸರಾ ಮಹೋತ್ಸವಕ್ಕೆ ಸಿದ್ಧಗಂಗಾ ಶ್ರೀ ಚಾಲನೆ: 5 ಸಾವಿರಕ್ಕೂ ಅಧಿಕ ಕಲಾವಿದರಿಂದ ಕಲಾ ಪ್ರದರ್ಶನಬಿಜೆಪಿ ಕೋರ್ ಕಮಿಟಿ ಸಭೆ: ಹಿರಿಯೂರು ಉಪಚುನಾವಣೆಗೆ ಕಮಲ ಪಕ್ಷದ ಕಸರತ್ತುಐಐಟಿ ಮದ್ರಾಸ್‌ನ ಶ್ರೀ ಜಲಕಂಠೇಶ್ವರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ