Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮಾನವೀಯತೆ ಕಳೆದು ಹೋಗುವ ಮುನ್ನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾನವೀಯತೆ ಕಳೆದು ಹೋಗುವ ಮುನ್ನ.......
ವೈಯಕ್ತಿಕ ಅಥವಾ ಸೈದ್ಧಾಂತಿಕ ವಾದ ವಿವಾದಗಳು ಏನೇ ಇರಲಿ
, ಪರ ವಿರೋಧ ನಿಲುವುಗಳು ಏನಾದರೂ ಆಗಿರಲಿ, ಆದರೆ ಮನುಷ್ಯನ ನಾಗರಿಕ ಸಮಾಜದ ಗುಣಲಕ್ಷಣಗಳನ್ನು ನಿಜಕ್ಕೂ ಅದರ ಮೂಲ ಸ್ವರೂಪದಲ್ಲಿ ಉಳಿಸಬೇಕಾದ ಅನಿವಾರ್ಯತೆ ಈಗ ಅತ್ಯಂತ ಪ್ರಮುಖ ವಿಷಯವಾಗಬೇಕಿದೆ........

ಅಭಿವೃದ್ಧಿಯ, ಆಧುನಿಕತೆಯ, ತಾಂತ್ರಿಕ ಪ್ರಗತಿಯ ಲಾಭಗಳನ್ನು ನಾವು ಪಡೆಯಬೇಕಾದರೆ ಮಾನವೀಯ ಮೌಲ್ಯಗಳ ಉಳಿವು ಮತ್ತು ಬೆಳವಣಿಗೆ ಬಹುಮುಖ್ಯ ಅಂಶ. ಇಲ್ಲದಿದ್ದರೆ ಎಲ್ಲಾ ಪ್ರಗತಿಯು ನಮ್ಮನ್ನು ನಿಧಾನವಾಗಿ ವಿನಾಶದ ಅಂಚಿಗೆ ಕೊಂಡೊಯ್ಯಬಹುದು. ಬಹುಶಃ ಈಗ ಆ ಹಂತದಲ್ಲಿ ನಾವಿದ್ದೇವೆ..........

ಆಹಾರದ ಕಲಬೆರಕೆ ಹಣಕ್ಕಾಗಿ, ಮಾಧ್ಯಮಗಳ ಬ್ರೇಕಿಂಗ್ ನ್ಯೂಸ್ ಹಣಕ್ಕಾಗಿ, ಮೌಲ್ವಿ, ಫಾದರ್, ಸ್ವಾಮಿಗಳ ವೇಷ ಹಣಕ್ಕಾಗಿ, ಡಾಕ್ಟರುಗಳು, ಮೇಷ್ಟ್ರುಗಳ ಆದ್ಯತೆ ಹಣಕ್ಕಾಗಿ, ರಾಜಕಾರಣಿಗಳು, ಸಮಾಜ ಸೇವಕರ ಮುಖವಾಡ ಹಣಕ್ಕಾಗಿ, ಅಧಿಕಾರಿಗಳ ಓದು ಬರಹ ಹಣಕ್ಕಾಗಿ, ಸಾಹಿತಿಗಳ ಹೋರಾಟಗಾರ ಮಾತು, ಅಕ್ಷರಗಳು ಹಣಕ್ಕಾಗಿ,......

ಕೊನೆಗೆ ಹೆಣ್ಣು ಗಂಡಿನ ಮದುವೆ ಸಂಬಂಧಗಳು ಸಹ ಹಣಕ್ಕಾಗಿ ಎಂಬಲ್ಲಿಗೆ ಈ ಸಮಾಜ ಬಂದು ನಿಂತಿದೆ. ಮುಂದೆ.........

ಅಭಿವೃದ್ಧಿಯೊಂದಿಗೆ, ತಂತ್ರಜ್ಞಾನದ ಬೆಳವಣಿಗೆಯೊಂದಿಗೆ, ಮಾನವೀಯ ಮೌಲ್ಯಗಳ - ನೈತಿಕ ಮೌಲ್ಯಗಳ ಬೆಳವಣಿಗೆಗೂ ಶ್ರಮಿಸಬೇಕಾಗುತ್ತದೆ. ಇಲ್ಲದಿದ್ದರೆ ಜೀವವಿಲ್ಲದ ಯಂತ್ರಮಾನವರಾಗುವ ಅಥವಾ ಅನೈತಿಕತೆಯೇ ಸಮಾಜದ ಮುಖ್ಯ ಗುಣಲಕ್ಷಣಗಳಾಗುವ ಸಾಧ್ಯತೆ ಇದೆ..........

ಗಾಳಿ, ನೀರು, ಆಹಾರ, ‌ಆಡಳಿತ ವ್ಯವಸ್ಥೆಯ ಜೊತೆಗೆ ಮನಸ್ಸು ಮಲಿನವಾದರೆ ಇಡೀ ಬದುಕಿನ ಗುಣಮಟ್ಟವೇ ಕುಸಿಯುತ್ತದೆ. ಈಗಾಗಲೇ ಅತೃಪ್ತಿ, ಅಸಮಾಧಾ,ನ ಅಸಹನೆಗಳೇ ಹೆಚ್ಚಾಗಿ ಕಾಡುತ್ತಿರುವ ಯುವ ಸಮೂಹ ಮುಂದೆ ಇನ್ನಷ್ಟು ಆತಂಕಕಾರಿ ಬೆಳವಣಿಗೆಗೆ ಕಾರಣವಾಗಬಹುದು.........

ಆದ್ದರಿಂದ ವ್ಯಕ್ತಿಯ ನೈತಿಕತೆಯ ಪಾಠ ಮನಗಳಲ್ಲಿ - ಮನೆಗಳಲ್ಲಿ - ಮತಗಳಲ್ಲಿ -  ಶಾಲೆಗಳಲ್ಲಿ - ಉದ್ಯೋಗಗಳಲ್ಲಿ - ವ್ಯವಹಾರಗಳಲ್ಲಿ - ಸಮಾಜದಲ್ಲಿ ನಿಧಾನವಾಗಿ ಪುನರ್ ಸ್ಥಾಪಿಸಬೇಕಾದ ಅವಶ್ಯಕತೆ ಇದೆ.........

ಅದು ಹೇಗಿರಬೇಕೆಂದರೇ.. ಒಬ್ಬ ಅಧಿಕಾರಿಗೆ ಲಂಚದ ಹಣ ಇನ್ನೊಬ್ಬರ ಎಂಜಲು, ಬೆವರು ಎನಿಸಬೇಕು. ಶ್ರೀಮಂತರ ಚಿನ್ನ, ಒಡವೆ, ಕಾರುಗಳ ಪ್ರದರ್ಶಕ ಮನೋಭಾವ, ಜನ ಸಾಮಾನ್ಯರಿಗೆ ಅಸಹ್ಯ ತರಿಸಬೇಕು. ಕೋಟ್ಯಂತರ ರೂಪಾಯಿ ಖರ್ಚಿನ ಮದುವೆಗಳು, ಪ್ರಜೆಗಳಿಗೆ ಬಹಳಷ್ಟು ಕೋಪ ಬರಿಸಬೇಕು. ಈ ಮದುವೆಗಳು ಟಿವಿ ಚಾನಲ್ ನೇರ ಪ್ರಸಾರ ವಾಕರಿಕೆ ಉಂಟುಮಾಡಬೇಕು.

ಪುಢಾರಿಗಳಿಗೆ ಜ್ಯೆಕಾರ ಹಾಕುವ ಜನರಿಗೆ ಅವಮಾನವಾಗಬೇಕು. ಕಳ್ಳ ಸ್ವಾಮೀಜಿಗಳ ಕಾಲು ಮುಗಿಯುವ ಭಕ್ತರಿಗೆ ನಾಚಿಕೆಯಾಗಬೇಕು. ಜ್ಯೋತಿಷ್ಯವನ್ನು ಕೇಳುವವರಿಗೆ ತಮ್ಮ ಬಗ್ಗೆ ಕೀಳರಿಮೆ ಬರಬೇಕು. ತಮ್ಮ ಜಾತಿಯ ಸಮಾವೇಶಗಳಲ್ಲಿ ಭಾಗವಹಿಸಲು ಜನರ ಮನಸ್ಸಿಗೆ ಕಹಿಯಾಗಬೇಕು. ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಸಾಹಿತಿಗಳ ಮನಸ್ಸಿಗೆ ನೋವಾಗಬೇಕು. ಸನ್ಮಾನಿಸಿಕೊಳ್ಳುವ ಸಮಾಜ ಸೇವಕರಿಗೆ ಆತ್ಮಸಾಕ್ಷಿ ಚುಚ್ಚಬೇಕು. ಬಡವರ ನರಳಾಟ ರಾಜಕಾರಣಿಗಳಿಗೆ ಕಣ್ಣೀರು ಬರಿಸಬೇಕು. ಇಲ್ಲದವರ ಮುಂದೆ ಸೂಟು ಬೂಟುಗಳು ಅಸಹ್ಯ ಹುಟ್ಟಿಸಬೇಕು..

ಗುಡಿಸಲುಗಳ ಮುಂದೆ ಭವ್ಯಭಂಗಲೆಗಳಲ್ಲಿರುವವರಿಗೆ ಪಶ್ಚಾತ್ತಾಪವಾಗಬೇಕು. ವರದಕ್ಷಿಣೆಯ ಸಂಕಟ ತೆಗೆದುಕೊಳ್ಳುವವರಿಗೆ ಪ್ರಾಣ ಸಂಕಟವಾಗಬೇಕು. ಆಗ ಸಹಜವಾಗಿಯೇ ಮಾನವೀಯ ಮೌಲ್ಯಗಳು ಮತ್ತೊಮ್ಮೆ ಈ ಸಮಾಜದಲ್ಲಿ ನೆಲೆಸಿ ನಮ್ಮ ಬದುಕಿನ ನೆಮ್ಮದಿಯ ಗುಣಮಟ್ಟ ಹೆಚ್ಚಾಗುತ್ತದೆ. ನಮ್ಮ ಜೀವಿತಾವಧಿಯಲ್ಲಿಯೇ ಆ ಬದಲಾವಣೆಗಳನ್ನು ನಿರೀಕ್ಷಿಸುವ ಕನಸಿನೊಂದಿಗೆ. ಲೇಖನ-ವಿವೇಕಾನಂದ. ಎಚ್. ಕೆ. 9663750451

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!