ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ತೊರೆ ಓಬೇನಹಳ್ಳಿ ಗ್ರಾಮದಲ್ಲಿ ಶ್ರೀ ಆನಂದಪ್ಪ ಗುರೂಜಿ ಮತ್ತು ಮುದ್ದು ರಂಗಪ್ಪ ಸ್ವಾಮಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಚಿತ್ರದುರ್ಗ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಜೆ.ಬಿ.ರಾಜು ರವರ ಅಧ್ಯಕ್ಷತೆಯಲ್ಲಿ ಶ್ರೀ ವಾಲ್ಮೀಕಿ ಮಹರ್ಷಿ ಕಂಚಿನ ಪ್ರತಿಮೆ ಸ್ಥಾಪನೆ ಮಾಡಲು ಭೂಮಿ ಪೂಜೆ ಮಾಡಲಾಯಿತ್ತು.
ಈ ಸಂಧರ್ಭದಲ್ಲಿ ಬಿಜೆಪಿ ತಾಲ್ಲೂಕು ಉಪಾಧ್ಯಕ್ಷ ತೊರೆಓಬ್ಬೇನಹಳ್ಳಿ ಶ್ರೀನಿವಾಸ್, ಬಿಜೆಪಿ ಜಿಲ್ಲಾ ಎಸ್ ಟಿ ಮೋರ್ಚಾ ಉಪಾಧ್ಯಕ್ಷ ಲೋಕೇಶ್ ಮೇಟಿಕುರ್ಕೆ, ಜಿಲ್ಲಾ ಕಾರ್ಯದರ್ಶಿ ದಕ್ಷಿಣಮೂರ್ತಿ, ಎಸ್.ಟಿ ಮೋರ್ಚಾ ತಾಲ್ಲೂಕು ಅಧ್ಯಕ್ಷರು ಪ್ರಜ್ವಲ್ ಹಾಗೂ ಸ್ಥಳೀಯ ಮುಖಂಡರಾದ ತಿಮ್ಮರಾಜು, ಗುರುಮೂರ್ತಿ, ಶಿವಣ್ಣ, ರಂಗಸ್ವಾಮಿ, ರವಿ, ನಾಗಣ್ಣ, ನವೀನ್, ಶಶಿಧರ್, ಬಸವರಾಜ್ ಹಳ್ಳಿಕಾರ್, ಪೂಜಾರ್ ನಾಗರಾಜ್, ಯುವ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಮತ್ತು ಯುವ ಮುಖಂಡರುಗಳು ಉಪಸ್ಥಿತರಿದ್ದರು.




