ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಸ್ವಾತಂತ್ರ್ಯ ಹೋರಾಟಗಾರ ಹಾಗೂ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ‘ಧರ್ತಿ ಆಬಾ’ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿ ಮತ್ತು ‘ಜನಜಾತೀಯ ಗೌರವ ದಿವಸ’ದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಗೌರವ ಅರ್ಪಿಸಿದರು.
ನವದೆಹಲಿಯ ಸಂಸತ್ ಭವನದ ಆವರಣದ ‘ಪ್ರೇರಣಾ ಸ್ಥಳ’ದಲ್ಲಿರುವ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಬ್ರಿಟಿಷ್ ಆಳ್ವಿಕೆಯ ವಿರುದ್ಧ ಬುಡಕಟ್ಟು ಜನರನ್ನು ಸಂಘಟಿಸಿ ಹೋರಾಡಿದ ಬಿರ್ಸಾ ಮುಂಡಾ ಅವರ ಅಪ್ರತಿಮ ಧೈರ್ಯ, ತ್ಯಾಗ ಹಾಗೂ ಆದಿವಾಸಿ ಸಂಸ್ಕೃತಿಯ ರಕ್ಷಣೆಗೆ ಅವರು ನೀಡಿದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಸ್ವಾತಂತ್ರ್ಯ ಸಂಗ್ರಾಮ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಬುಡಕಟ್ಟು ಸಮುದಾಯಗಳ ಐತಿಹಾಸಿಕ ಪಾತ್ರವನ್ನು ಗೌರವಿಸಲು ಕೇಂದ್ರ ಸರ್ಕಾರವು ಪ್ರತಿ ವರ್ಷ ನವೆಂಬರ್ 15ರಂದು ದೇಶಾದ್ಯಂತ ‘ಜನಜಾತೀಯ ಗೌರವ ದಿವಸ’ವನ್ನಾಗಿ ಆಚರಿಸಲಾಯಿತು.




