Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾಂಗ್ರೆಸ್ ಆಡಳಿತ ಪ್ರಶ್ನಿಸಲು ಬಿಜೆಪಿ ಅವರಿಗೆ ನೈತಿಕತೆಇಲ್ಲ

ಚಂದ್ರವಳ್ಳಿ ನ್ಯೂಸ್, ಮೈಸೂರು:
ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಈಗ ನಮ್ಮನ್ನು ಪ್ರಶ್ನಿಸಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐಗೆ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದು ಸಿಎಂ ತಿಳಿಸಿದರು.

ಬಳ್ಳಾರಿ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ವಿರೋಧ ಪಕ್ಷದಲ್ಲಿರುವಾಗ ಯಾವ ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಸೇರಿದ ವಿಚಾರ ಎಂದು ಹೇಳಿದರು.

ಸಂಸ್ಕೃತಿ ಇಲ್ಲದ ಬಿಜೆಪಿ:
ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಚಿವರಾದ ಶ್ರೀರಾಮುಲು
, ಜನಾರ್ದನ ರೆಡ್ಡಿ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿ, ಇದರಿಂದ ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಬಳ್ಳಾರಿಗೆ ಬರಬಾರದೆಂದು ಜನಾರ್ದನ ರೆಡ್ಡಿಗೆ ಏಕೆ ಹೇಳಿದ್ದರು?, ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು?, ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ರೆಡ್ಡಿ ಹಗರಣದ ಬಗ್ಗೆ ವರದಿ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದ ಬಿಜೆಪಿ:
ಬಿಜೆಪಿ ಸರ್ಕಾರದ ಆಡಳಿತ ಇದ್ದಾಗ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ
, ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು ಎಂದರು.

ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಎಂದ ಅವರು, ಕಾಂಗ್ರೆಸ್​ನವರು ರಿಪಬ್ಲಿಕ್ ಆಫ್ ಕರ್ನಾಟಕ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿ, ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ? ಎಂದು ಸಿಎಂ ಅವರು ಕಿಡಿಕಾರಿದರು.

ವಿಬಿ ಜಿ ಗ್ರಾಮ್ ಜಿ ರದ್ದು ಮಾಡಲು ಒತ್ತಾಯಿಸಲು ಅಧಿವೇಶನ: ಅಧಿವೇಶನ ಆಯೋಜಿಸಿರುವುದು ರಾಜಕೀಯ ದುರ್ಬಳಕೆ ಎಂದು ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಸಿಎಂ, ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ. ಮನರೇಗಾ ಮೂಲಕ ಉದ್ಯೋಗ ಖಾತ್ರಿ, ಶಿಕ್ಷಣ, ಮಾಹಿತಿ ಹಕ್ಕು, ಆಹಾರ ಭದ್ರತೆ ತಂದದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿರುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಬಿ ಜಿ ಗ್ರಾಮ್ ಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್​ಗಾ​ರ್ ಅಜೀವಿಕ ಮಿಷನ್ ಗ್ರಾಮೀಣ) ಎನ್ನುವುದು ಇದರ ಅರ್ಥ. ಕಾರ್ಯಕ್ರಮವನ್ನು ರದ್ದು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ, ಅದರರ್ಥ ರಾಮ್ ಅಲ್ಲ ಎಂದರು.

ಕಾನೂನಿನ ಕ್ರಮಕ್ಕೆ ನಾವು ಅಡ್ಡಿಬರುವುದಿಲ್ಲ: ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಹಾಗೂ ಅಬಕಾರಿ ಸಚಿವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ಕಾನೂನಿನ ಕ್ರಮಕ್ಕೆ ನಾವು ಅಡ್ಡಿಬರುವುದಿಲ್ಲ. 40% ಕಮಿಷನ್ ಪಡೆಯುತ್ತಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಆರೋಪ ಮಾಡಿದ್ದರಲ್ಲ ಎಂದು ಹೇಳಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!