ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮತ್ತು ಬಿಹಾರ ರಾಜ್ಯಗಳ ಉಸ್ತುವಾರಿಯಾದ ಹರೀಶ್ ದ್ವಿವೇದಿ ಅವರನ್ನು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಅವರು ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಈ ಭೇಟಿಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳು, ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸಂಘಟನಾತ್ಮಕ ಚಟುವಟಿಕೆಗಳು ಹಾಗೂ ಮುಂದಿನ ಪಕ್ಷದ ಕಾರ್ಯಕ್ರಮಗಳ ಕುರಿತು ಇಬ್ಬರೂ ನಾಯಕರು ಸುದೀರ್ಘ ಚರ್ಚೆ ನಡೆಸಿದರು.
ಪಕ್ಷದ ಬಲವರ್ಧನೆಗೆ ಸಂಬಂಧಿಸಿದಂತೆ ವರಿಷ್ಠರ ಮಾರ್ಗದರ್ಶನ ಪಡೆದಿರುವುದಾಗಿ ಮತ್ತು ಸಕಾರಾತ್ಮಕವಾಗಿ ಮಾತುಕತೆ ನಡೆದಿರುವುದಾಗಿ ಸಿ.ಟಿ. ರವಿ ತಿಳಿಸಿದ್ದಾರೆ.




