Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ವಿಜಯೇಂದ್ರ ಪ್ರತಿಕ್ರಿಯೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಛಾಟನೆ ಮಾಡಿದ್ದು ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.


ಬಿಜೆಪಿ ಪಕ್ಷದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವದಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ಯತ್ನಾಳ್ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ  ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ.

ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ.

ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ ಎಂದು ವಿಜಯೇಂದ್ರ ಅವರು ಸ್ಪಷ್ಪಪಡಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!