Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

20 ವರ್ಷ ಮೇಲ್ಪಟ್ಟ ವಾಹನಗಳಿಗೆ ಬ್ರೇಕ್: ಜಿಲ್ಲಾಧಿಕಾರಿ ವೆಂಕಟೇಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
20
ವರ್ಷ ಮೇಲ್ಪಟ್ಟ ವಾಹನಗಳಿಗೆ ಬ್ರೇಕ್ ಕಡ್ಡಾಯವಾಗಿ ತಡೆಯೊಡ್ಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಗಣಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಅದಿರು ಹಾಗೂ ಖನಿಜಗಳನ್ನು ಸಾಗಣೆ ಮಾಡುವ ವಾಹನಗಳನ್ನು ತಪಾಸಣೆ ಮಾಡಬೇಕು. 20 ವರ್ಷ ಮೇಲ್ಪಟ್ಟ ವಾಹನಗಳ ಎಫ್.ಸಿ ನವೀಕರಣಗೊಳಿಸಬಾರದು, ಅಂತಹ ವಾಹನಗಳು ಕಾರ್ಯಾಚರಣೆ ಮಾಡುತ್ತಿದ್ದಲ್ಲಿ ಅವುಗಳ ಸಂಚಾರಕ್ಕೆ ತಡೆ ಒಡ್ಡಬೇಕು.

ಅನುಮತಿಸಿದ ತೂಕಕ್ಕಿಂತ ಹೆಚ್ಚಿನ ಅದಿರು ಸಾಗಾಟ ಮಾಡುವ ವಾಹನಗಳನ್ನು ತಡೆದು, ದಂಡ ವಿಧಿಸಬೇಕು. ಅದಿರನ್ನು ವಶಪಡಿಸಿಕೊಂಡು ವಾಹನ ಜಪ್ತಿ ಮಾಡುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಲ್ಲಿ 335ಕ್ಕೂ ಹೆಚ್ಚು ಅದಿರು ಸಾಗಾಣಿಕೆಯ ಭಾರಿ ವಾಹನಗಳು ಇದ್ದು, ಇದರಲ್ಲಿ 18 ವಾಹನಗಳು 20 ವರ್ಷ ಪೂರೈಸಿವೆ. 268 ವಾಹನಗಳು 15 ವರ್ಷ ಪೂರೈಸಿವೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆ ಸಿಂಘೆ ಸಭೆಯಲ್ಲಿ ಮಾಹಿತಿ ನೀಡದರು. 

ಕ್ರಷರ್‍ಗಳ ನಿಯಮ ಪಾಲನೆ ಮಾಡಲಿ:
ಕಲ್ಲು ಪುಡಿ ಮಾಡುವ ಘಟಕ (ಕ್ರಷರ್)ಗಳು ಪಾಲನೆ ಮಾಡಬೇಕಾದ ನಿಯಮಗಳ ಬಗ್ಗೆ ಕರ್ನಾಟಕ ಕಲ್ಲು ಪುಡಿ ಮಾಡುವ ಘಟಗಳ ನಿಯಂತ್ರಣ ಅಧಿನಿಯ -2011 ಹಾಗೂ ತಿದ್ದುಪಡಿ ಕಾಯ್ದೆ 2013ರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೂ ಜಿಲ್ಲೆಯಲ್ಲಿ ಹಲವು ಕ್ರಷರ್‍ಗಳಲ್ಲಿ ಈ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ.

ಕಲ್ಲು ದೂಳು, ಬೆಳೆಗಳ ಮೇಲೆ ಬಿದ್ದು, ಇಳುವರಿ ಕಡಿಮೆಯಾಗುತ್ತಿದೆ ಎಂದು ರೈತರು ದೂರು ನೀಡಿದ್ದಾರೆ. ಇದರ ಜೊತೆಗೆ ಕ್ರಷರ್‍ಗಳ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಾಸಿಸುವ ಜನರು ಶ್ವಾಸಕೋಶ ಸಂಬಂಧಿಸಿದ ಖಾಯಿಲೆಗಳಿಗೆ ತುತ್ತಾಗುತಿದ್ದಾರೆ.

ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕಾರ್ಯಚರಣೆ ನಡೆಸುತ್ತಿರುವ ಎಲ್ಲ 29 ಕ್ರಷರ್‍ಗಳ ಪರಿಶೀಲನೆ ಮಾಡಿ, ಪರಿಸರ ಮಾಲಿನ್ಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಸಭೆಯಲ್ಲಿ ಹೇಳಿದರು. 

ಇದೆ ವೇಳೆ, ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ-1994ರ ನಿಯಮ 32ರ ಅನ್ವಯ ಅಲಂಕಾರಿಕ ಶಿಲೆ, ಕಟ್ಟಡ ಕಲ್ಲು, ವೈಟ್ ಕ್ವಾಟ್ಜ್‍ಗಳ ಗಣಿಗಾರಿಕೆಗೆ ಮಂಜೂರಾತಿ ನೀಡುವ ಕುರಿತು ಹಾಗೂ ಮರಳು ಗಣಿ ಗುತ್ತಿಗೆ ಮಂಜೂರಾತಿ ಕೋರಿ ಸ್ವೀಕೃತವಾದ ಅರ್ಜಿಗಳ ಕುರಿತು ಚರ್ಚಿಸಲಾಯಿತು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ