Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Business News

ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026
27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್‍ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ.

ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಐಪಿಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇ (ಎಲ್‍ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾರ್ಚ್ 6 ರಂದು ಬೆಳಿಗ್ಗೆ 10.15 ಗಂಟೆಯಿಂದ ಪ್ರಸಾರ ಮಾಡಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!