ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ :
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರ ಹೊಮ್ಮಿರುವ ತಂಡದ ಕ್ಯಾಪ್ಟನ್ ಹೇಮಂತ್‌ಕುಮಾರ್‌ನನ್ನು ಮಾರುತಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್.ಬಿ.ರಾಜಪ್ಪ ಕೆಂಗುಂಟೆ ಅಭಿನಂದಿಸಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕರಿಸಿದ್ದಯ್ಯಒಡೆಯರ್ ತಾಳಿಕಟ್ಟೆ, ಪ್ರಾಂಶುಪಾಲರಾದ ಕೊಟ್ರಪ್ಪ ಸಿ.ಕೆ. ಹಾಗೂ ಸಿಬ್ಬಂದಿ ವರ್ಗದವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಜಯಶಾಲಿಗಳಾದ ಪುರಷರ ತಂಡಕ್ಕೆ ಶುಭ ಹಾರೈಸಿದ್ದಾರೆ.




