ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ವೇದಾವತಿ ನಗರದಲ್ಲಿರುವ ಆರ್.ಬಿ.ಎನ್ (RBN) ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ಭಾರತದ ಮಾಜಿ ರಾಷ್ಟ್ರಪತಿ, ಮಹಾನ್ ತತ್ವಜ್ಞಾನಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರಿಗೆ ಶುಭಾಶಯ ಕೋರಿ, ಪುಷ್ಪ ನಮನ ಸಲ್ಲಿಸುವ ಮೂಲಕ ಗುರುವಂದನೆ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಶಿಕ್ಷಕರ ಮಹತ್ವ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅವರ ಕೊಡುಗೆಯನ್ನು ಸ್ಮರಿಸಿ ಉಪನ್ಯಾಸ ನೀಡಿದರು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಸಂಸ್ಥೆಯ ಮುಖ್ಯಸ್ಥರಾದ ಖಂಡೇನಹಳ್ಳಿ ಜಿ.ಹನುಮಂತರಾಯಪ್ಪ, ಜವನಗೊಂಡನಹಳ್ಳಿ ತಿಪ್ಪೇಸ್ವಾಮಿ ಸೇರಿದಂತೆ ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕರು ಮಕ್ಕಳು ಸಿಬ್ಬಂದಿ ವರ್ಗದವರು ಇದ್ದರು.




