Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಷ್ಟಾಚಾರ ಪಾಲಿಸದ ಕೇಂದ್ರ ಸರ್ಕಾರ-ಸಿಎಂ ಆರೋಪ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ್ದೆ, ಜೊತೆಗೆ ಪತ್ರವನ್ನೂ ಬರೆಯಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ.


ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರು, ಆದರೆ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೆಯೆ ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಟಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ.

ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲೀ, ಸಂಬಂಧಪಟ್ಟ ಇಲಾಖಾ ಸಚಿವರಿಗಾಗಲೀ, ಸ್ಥಳೀಯ ಶಾಸಕರಿಗಾಗಲೀ ಸರಿಯಾಗಿ ಆಮಂತ್ರಣ ನೀಡಿಲ್ಲ. ಸರ್ಕಾರಗಳ ನಡುವೆ ಹೀಗೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST