Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಚಾಲುಕ್ಯರ ಕಾಲದ ಶಾಸನ ಪತ್ತೆ

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಬಾದಾಮಿ ಚಾಲುಕ್ಯರ ಅರಸ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನವು ಕೆರೆಯಲ್ಲಿ ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದಾಪುರ ಕೆರೆಯಲ್ಲಿ ಸ್ಥಳೀಯರು ಜೆಸಿಬಿಯಿಂದ ಮಣ್ಣು ತೆಗೆಯುವ ಸಂದರ್ಭದಲ್ಲಿ ಈ ಶಿಲಾಶಾಸನ ಪತ್ತೆ ಆಗಿದೆ.


ವಿಷಯ ತಿಳಿಯುತ್ತಿದ್ದಂತೆ ಪುರಾತತ್ವ ಇಲಾಖೆ ನಿರ್ದೇಶಕರು ಸ್ಥಳಕ್ಕೆ ಭೇಟಿ ನೀಡಿ ಶಾಸನಗಳನ್ನು ಪರಿಶೀಲಿಸಿದ ನಂತರ, ಇದು ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಎಂಬುದು ತಿಳಿದು ಬಂದಿದೆ. ಕೆರೆಯಲ್ಲಿ ಪತ್ತೆಯಾದ ಶಾಸನವು 5 ಅಡಿ ಉದ್ದವಿದ್ದು, ಹಳೆಗನ್ನಡದ 17 ಸಾಲುಗಳನ್ನು ಒಳಗೊಂಡಿದೆ. ಇದು ಕ್ರಿ.ಶ. 7ನೇ ಶತಮಾನದ (ಕ್ರಿ.ಶ.654-681) ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಾಸನವಾಗಿದೆ ಎಂದು ಕಮಲಾಪುರದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕ ಡಾ.ಆರ್.ಶೇಜೇಶ್ವರ ತಿಳಿಸಿದ್ದಾರೆ.

ಏನಿದು ಶಾಸನ?: ಬಾದಾಮಿ ಚಾಲುಕ್ಯರ ಅರಸ ಒಂದನೇ ವಿಕ್ರಮಾದಿತ್ಯನು ರಾಜ್ಯವಾಳುವಾಗ ಅವನ ಅಧಿಕಾರಿ ಸಿಂಘವೆಣ್ಣನು ಬಳ್ಳಾವಿ ನಾಡನ್ನು ಆಳುತ್ತಿದ್ದನು. ಆಗ ಪೂರ್ವ ಮರ್ಯಾದೆಯಿಂದ ಪ್ರಜೆಗಳಿಗಾಗಿ ಊರ ಮೇಲಿನ ಕೆಲವು ತೆರಿಗೆಗಳನ್ನು ಮನ್ನಾ ಮಾಡಿರುವುದು, ಕೆರೆಯನ್ನು ನಿರ್ಮಿಸಿದ ರಾಜರಿಗೆ ಆರು ಭೂಮಿಯನ್ನು ದಾನ ನೀಡಿರುವುದು ಹಾಗೂ ಈ ಭೂಮಿಯು ಬಳ್ಳಾವಿ ಎಪ್ಪತ್ತರ ಒಕ್ಕಲುಗಳಿಗೆ ಸಲ್ಲುತ್ತೆದೆಂದು ಶಾಸನದಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಶಾಸನದ ಶೋಧನೆಯಿಂದ ಬಳ್ಳಾವಿ ಎಪ್ಪತ್ತು ಎಂಬ 70 ಗ್ರಾಮಗಳಿದ್ದ ಆಡಳಿತ ವಿಭಾಗದ ಪ್ರಾಚೀನತೆ ತಿಳಿದು ಬಂದಿದೆ. ಈ ಶಾಸನವು 1,344 ವರ್ಷಗಳ ಪುರಾತನವಾದದ್ದು ಎಂದು ತಿಳಿಯುತ್ತದೆ. ಈ ಶಾಸನದ ಮುಂಭಾಗ ಹಾಗೂ ಹಿಂಭಾಗದಲ್ಲಿ ಕ್ರಿ.ಶ. 17ನೇ ಶತಮಾನದಲ್ಲಿ ಅಪೂರ್ಣ ಉಬ್ಬು ಶಿಲ್ಪವಿದೆ ಎಂದು ಡಾ.ಆರ್.ಶೇಜೇಶ್ವರ ಮಾಹಿತಿ ನೀಡಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಜ್ಞೆಯ ಜಾಗೃತಿ, ಬದುಕಿನ ಸಂಸ್ಕೃತಿ:ತಂತ್ರಜ್ಞಾನದ ಅತಿರೇಕ -ಸಾಮಾಜಿಕ ಸಾಮರಸ್ಯಕ್ಕೆ ಗಂಡಾಂತರ— ಜಾಗೃತಿ ಅಗತ್ಯಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆಕೆಪಿಸಿಸಿ ನಿಧಿಗೆ ಶಾಲೂ-ಹಾರದ ಬದಲು ದೇಣಿಗೆ ನೀಡಿ: ಬಿ.ಕೆ. ಹರಿಪ್ರಸಾದ್ ಕರೆ ಹಿರಿಯೂರು ತಾಲೂಕಿನಲ್ಲಿ ಮಳೆ ಅಬ್ಬರ: ಬಬ್ಬೂರು ಸಮೀಪದ ಜಮೀನಿನಲ್ಲಿ ನಿಂತ ಮಳೆ ನೀರುಸಮಾನತೆಗಾಗಿ ಸಹಭೋಜನ: ಅರಿವು ಭಾರತದಿಂದ ವಿಶಿಷ್ಟ ಚಿಂತನೆ–ರಾಹುಲ್ ಗಾಂಧಿ ವಿರುದ್ಧ ಗರ್ಭಿಣಿ ಪತ್ರಕರ್ತೆಯ ಗಂಭೀರ ಆರೋಪ: ಪೊಲೀಸ್ ಆಯುಕ್ತರಿಗೆ ಕ್ರಿಮಿನಲ್ ದೂರುಸರ್ಕಾರಿ ನೌಕರರು ಹಾಗೂ ಗುತ್ತಿಗೆ ಸಿಬ್ಬಂದಿಗೆ ರಾತ್ರಿ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರದ ಮಹತ್ವದ ಆದೇಶಮಹತ್ವದ ಆಡಳಿತಾತ್ಮಕ ಸುಧಾರಣೆ: ಸಕಾಲ ವ್ಯಾಪ್ತಿಗೆ ಎಲ್ಲಾ ಸರ್ಕಾರಿ ಸೇವೆಗಳು ಹಾಗೂ ಆರ್‌ಟಿಐ ಆನ್‌ಲೈನ್ ಕಡ್ಡಾಯ