ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮೈಸೂರು ಜಿಲ್ಲಾಡಳಿತದ ವತಿಯಿಂದ ಆತ್ಮೀಯ ಆಹ್ವಾನ ನೀಡಲಾಯಿತು.
ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನೇರವಾಗಿ ಭೇಟಿಯಾಗಿ, ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಅಧಿಕೃತ ಆಹ್ವಾನ ಪತ್ರಿಕೆ ನೀಡಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಎಒ) ಎಸ್. ಯುಕೇಶ್ ಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.




