ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ, ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ 'ಪೌರಕಾರ್ಮಿಕರ ದಿನಾಚರಣೆ'ಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನಾಡಿನ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕಾಗಿ ಶ್ರಮಿಸುವ ಕಾಯಕಯೋಗಿಗಳ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಲಾಯಿತು.
ಈ ಶುಭ ಸಮಾರಂಭದಲ್ಲಿ ಸಚಿವರಾದ ಕೆ. ಹೆಚ್. ಮುನಿಯಪ್ಪ, ಹೆಚ್. ಸಿ. ಬಾಲಕೃಷ್ಣ, ಡಾ. ಯತೀಂದ್ರ ಸಿದ್ದರಾಮಯ್ಯ, ಕೆ. ಎಸ್. ಬಸವಂತಪ್ಪ, ಮಾಜಿ ಸಚಿವರಾದ ಹೆಚ್. ಆಂಜನೇಯ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ. ರಘು, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಶೋಕ್ ಸಾಲಪ್ಪ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶ್ರೀಮತಿ ಬಿ. ಬಿ. ಕಾವೇರಿ, ಪೌರಕಾರ್ಮಿಕ ಅಭಿವೃದ್ಧಿ ಸಂಘದ ಅಧ್ಯಕ್ಷೆ ಶ್ರೀಮತಿ ಶೈಲಾ ಕೆ. ಡಿ. ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




