ಚಂದ್ರವಳ್ಳಿ ನ್ಯೂಸ್, ಹಾಸನ:
ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಕುಟುಂಬ ಸಮೇತರಾಗಿ ಹಾಸನದ ಅಧಿದೇವತೆ, ಶಕ್ತಿ ಸ್ವರೂಪಿಣಿ ಶ್ರೀ ಹಾಸನಾಂಬೆ ತಾಯಿಯ ದಿವ್ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಹಾಸನಾಂಬೆ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಅವರು, ತಾಯಿಯ ಸನ್ನಿಧಿಯಲ್ಲಿ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ನಾಡಿನ ಸಮೃದ್ಧಿ, ರಾಜ್ಯದ ಅಭಿವೃದ್ಧಿ, ಜನರ ಕಲ್ಯಾಣ ಹಾಗೂ ಪ್ರತಿಯೊಂದು ಕುಟುಂಬದಲ್ಲೂ ಸುಖ, ಶಾಂತಿ ಮತ್ತು ನೆಮ್ಮದಿ ನೆಲೆಸಲಿ ಎಂದು ಹಾಸನಾಂಬೆ ತಾಯಿಯಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಎಂ. ಪಟೇಲ್ ಸೇರಿದಂತೆ ಹಲವು ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳ ಹಾಸನಾಂಬೆ ದರ್ಶನದ ಸಂದರ್ಭದಲ್ಲಿ ದೇವಾಲಯದ ಆವರಣದಲ್ಲಿ ಭಕ್ತಿಪೂರ್ಣ ವಾತಾವರಣ ನಿರ್ಮಾಣವಾಗಿತ್ತು.




