Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಮುಖ್ಯಮಂತ್ರಿ ಚಾಲನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶ-ವಿದೇಶಿಗರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಉದ್ಘಾಟಿಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಾಲೋಕ ಉದ್ಘಾಟಿಸಿ ಮಾತನಾಡಿ ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಹೆಗ್ಗುರುತು ಅಲ್ಲದೆ ಆಕರ್ಷಕ ಕೇಂದ್ರವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬಂದು ಹೋಗುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮೆಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.‌

ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ವಿಮಾನ ನಿಲ್ದಾಣದ ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳುಮುಂತಾದವು ಸಿಗಲಿವೆ. ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯವೇ ಹೆಮ್ಮೆಪಡುವಂತಹ ಪಾರಂಪರಿಕ ಮತ್ತು ಭೌಗೋಳಿಕ ವಿಶಿಷ್ಟತೆಯ ಮನ್ನಣೆ ಹೊಂದಿರುವ ಉತ್ಪನ್ನಗಳನ್ನು ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಮಳಿಗೆ ಆರಂಭದ ಆಶಯವಾಗಿದೆ. ಇದಕ್ಕೆ ಸರಕಾರಿ ಸ್ವಾಮ್ಯದ ಕೆ.ಎಸ್.ಡಿ.ಎಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತ, ಕೆಎಸ್ಐಸಿ, ಕಾಫಿ ಬೋರ್ಡ್ ಮತ್ತು ಲಿಡ್ಕರ್ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ. ವಿಮಾನ ನಿಲ್ದಾಣಕ್ಕೆ ಬರುವವರಿಗೆ ಮತ್ತು ಇಲ್ಲಿಂದ ಹೋಗುವವರಿಗೆ ಒಂದೇ ತಾಣದಲ್ಲಿ ಕರ್ನಾಟಕದ ಅಸ್ಮಿತೆ ಇಲ್ಲಿ ಅನುಭವಕ್ಕೆ ಸಿಗಲಿದೆ ಎಂದು ಪಾಟೀಲ್ ಹೇಳಿದರು.

ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಕಲಾಲೋಕ ಮಳಿಗೆಗೆ ಟರ್ಮಿನಲ್ -2ರ ಡೊಮೆಸ್ಟಿಕ್ ಬೇನಲ್ಲಿ 132 ಚ.ಮೀ. ಜಾಗವನ್ನು ಬಾಡಿಗೆಗೆ ಒದಗಿಸಿದೆ. ಟರ್ಮಿನಲ್-2ರಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರ ನಿರ್ಗಮನ ವಲಯದಲ್ಲಿ 140 ಚ.ಮೀ. ಜಾಗದಲ್ಲಿ ಇಂತಹುದೇ ಮತ್ತೊಂದು ಮಳಿಗೆ ಆರಂಭಿಸಲಾಗುವುದು. ಮಳಿಗೆಯನ್ನು ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪಡಿಯಚ್ಚಿನಂತೆ ಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಹಿಂದೆ ದೂರದೃಷ್ಟಿ ಇದೆ ಎಂದು ಅವರು ನುಡಿದಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ನಿರ್ಮಿಸಿರುವ ಕಲಾಲೋಕ ಮಳಿಗೆಯನ್ನು ಘಂಟಾನಾದದ ಮೂಲಕ ಮಂಗಳವಾರ ಉದ್ಘಾಟಿಸಿದರು.


ಜೊತೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪುರ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಜವಳಿ ಆಯುಕ್ತೆ ಜ್ಯೋತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಪಿ.ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!