Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆ ಮುಂದೂಡಲು ನಟ ದರ್ಶನ್‌ಕಸರತ್ತು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ಕಾನೂನು ಹೋರಾಟದಲ್ಲಿ ಒಂದಾದ ಮೇಲೊಂದರಂತೆ ಹಿನ್ನಡೆಯಾಗುತ್ತಿದ್ದು, ಪ್ರಕರಣದ ಮತ್ತೊಬ್ಬ ಆರೋಪಿಯಿಂದ ತಮ್ಮ ವಿರುದ್ಧವೇ ಬರಲಿರುವ ಪ್ರಮುಖ ಸಾಕ್ಷ್ಯವನ್ನು ತಡೆಯಲು ತೀವ್ರ ಕಸರತ್ತು ನಡೆಸಿದ್ದಾರೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗಲು (ಅಪ್ರೂವರ್) ಮುಂದಾಗಿದ್ದು, ಈ ಪ್ರಕ್ರಿಯೆಯನ್ನು ತಡೆಯಲು ದರ್ಶನ್ ಪರ ವಕೀಲರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.   

ಹೈಕೋರ್ಟ್‌ನಲ್ಲಿ ಹಿನ್ನಡೆ   ಪ್ರದೋಷ್ ಮಾಫಿ ಸಾಕ್ಷಿಯಾಗಲು ಒಪ್ಪಿಗೆ ನೀಡಿರುವ ವಿಚಾರಣಾ ಕೋರ್ಟ್ ಆದೇಶವನ್ನು ಪ್ರಶ್ನಿಸಿ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಕರ್ನಾಟಕ ಹೈಕೋರ್ಟ್, ವಿಚಾರಣಾ ಕೋರ್ಟ್ ಆದೇಶದಲ್ಲಿ ಯಾವುದೇ ಕಾನೂನುಬಾಹಿರ ಅಂಶಗಳಿಲ್ಲ ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ವಜಾಗೊಳಿಸಿತ್ತು.

Advertisement

 ಅಲ್ಲದೆ, ಮಾಫಿ ಸಾಕ್ಷಿ ಪ್ರಕ್ರಿಯೆಯನ್ನು ಪ್ರಶ್ನಿಸುವಂತಿಲ್ಲ ಬದಲಿಗೆ ಆ ಪ್ರಕ್ರಿಯೆಯಲ್ಲಿ ಅಥವಾ ಪಾಟಿ ಸವಾಲಿನ ವೇಳೆ ಕಾನೂನುಬದ್ಧವಾಗಿ ಪ್ರಶ್ನಿಸಲು ಅವಕಾಶವಿದೆ ಎಂದು ಹೈಕೋರ್ಟ್ ತಿಳಿಸಿತ್ತು.   ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹಾಗೂ ಅರ್ಜಿ ಸಲ್ಲಿಕೆಹೈಕೋರ್ಟ್‌ನಲ್ಲಿ ಮುಖಭಂಗವಾದ ಬಳಿಕ, ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ದರ್ಶನ್ ಕಾನೂನು ತಂಡ ನಿರ್ಧರಿಸಿದೆ.

ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆಯನ್ನು ದಾಖಲಿಸಲು 59ನೇ ಸಿಸಿಹೆಚ್ ಕೋರ್ಟ್ ಸೆಪ್ಟೆಂಬರ್ 28ಕ್ಕೆ ದಿನಾಂಕ ನಿಗದಿಪಡಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿರುವ ದರ್ಶನ್ ಪರ ವಕೀಲರು, ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಒಂದು ವಾರ ಕಾಲ ಮುಂದೂಡುವಂತೆ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ.

  ಈ ಬೆಳವಣಿಗೆಯು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದು, ನ್ಯಾಯಾಲಯದ ಮುಂದಿನ ನಿರ್ಧಾರದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.  

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​ಗೆ 14 ದಿನ ನ್ಯಾಯಾಂಗ ಬಂಧನರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮಾಫಿ ಸಾಕ್ಷಿಯಾದ ಪ್ರದೋಷ್- ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ಆರಂಭ!ನಕಲಿ ಔಷಧ ಜಾಲ: ಪ್ರಮುಖ ಆರೋಪಿ ಪ್ರಶಾಂತ್ ಎಸ್‌ಐಟಿ ವಶಕ್ಕೆ!ಚುನಾವಣಾ ಆಯೋಗ, ಎಸ್ಐಆರ್, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಕಾಂಗ್ರೆಸ್ಪ್ರಯಾಣಿಕರ ಪರದಾಟ: ಸಾರಿಗೆ ಸಂಸ್ಥೆ ಬಸ್‌ಗಳು ಹಿರಿಯೂರು ನಗರದ ಒಳಗೆ ಸಂಚರಿಸುವಂತೆ ಸಾರ್ವಜನಿಕರ ಒತ್ತಾಯಸೂಗೂರಿನಲ್ಲಿ ವಿದ್ಯಾರ್ಥಿನಿಯರಿಂದ 'ಹಸಿರಂಚು' ಮಾಹಿತಿ ಕೇಂದ್ರ ಹಾಗೂ ಪೌಷ್ಟಿಕ ತೋಟ ಉದ್ಘಾಟನೆಪಟಾಕಿ ಸಿಡಿಸುವುದನ್ನು ರದ್ದುಗೊಳಿಸಿ ಸಾರ್ಥಕ ಸೇವೆ: ಕ್ಯಾದಿಗುಂಟೆ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಪುಸ್ತಕ, ಪೆನ್ ವಿತರಣೆಕಾಮನ್‌ವೆಲ್ತ್ ಪವರ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಚಿನ್ ಸಾಳುಂಕೆ: ಎಂ.ಬಿ. ಪಾಟೀಲ್ ಶ್ಲಾಘನೆಚಂದ್ರು ಅವರು ಶಾಶ್ವತ ಮುಖ್ಯಮಂತ್ರಿ, ಅವರಿಗೆ ಮಾಜಿ ಪದವಿಲ್ಲ: ಸಿದ್ದರಾಮಯ್ಯ ಬಣ್ಣನೆನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ 'ರೈತ ಸ್ವಾಭಿಮಾನ ಪಾದಯಾತ್ರೆಗೆ ಚಾಲನೆ':