Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಿಎಂ-ಡಿಸಿಎಂ ಅವರೇ ಈ ಪ್ರಶ್ನೆಗಳಿಗೆ ಉತ್ತರಿಸುವಿರಾ?

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್
ಅವರ ನಡುವಿನ ಬಹುನಿರೀಕ್ಷಿತ 'ಬೆಳಗಿನ ಉಪಾಹಾರ ಶೃಂಗಸಭೆ' ಅಂತೂ ಇಂತೂ ಜರುಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಂಗ್ಯವಾಡಿದ್ದಾರೆ.

ಅಸಲಿಗೆ ಇದನ್ನು "ಬ್ರೇಕ್‌ಫಾಸ್ಟ್ ಮೀಟಿಂಗ್" ಎಂದು ಕರೆಯುವುದು ಒಂದು ಔದಾರ್ಯವೇ ಸರಿ. ನಿಜ ಹೇಳಬೇಕು ಅಂದರೆ ಇದು ದಿನಬೆಳಗಾದರೆ ಒಬ್ಬರ ಮೇಲೊಬ್ಬರು ಹೊಂಚು ಹಾಕುವ, ಕತ್ತಿ ಮಸಿಯುವ ಎರಡು ಯುದ್ಧ ನಿರತ ಬಣಗಳ ಕಮಾಂಡರ್‌ಗಳ ನಡುವಿನ "ಕದನ ವಿರಾಮ" ಸಭೆಯಂತೆ ಕಾಣಿಸಿತು. ಎಲ್ಲಕ್ಕಿಂತ ಮಿಗಿಲಾದ ಅತ್ಯಂತ ಹಾಸ್ಯಾಸ್ಪದ ಸಂಗತಿ ಏನೆಂದರೆ - ಇಬ್ಬರೂ ನಾಯಕರು ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿರುವ ಎಲ್ಲಾ ಗೊಂದಲಗಳಿಗೆ ಮಾಧ್ಯಮಗಳನ್ನೇ ದೂಷಿಸುತ್ತಿರುವುದು ಎಂದು ಅಶೋಕ್ ಟೀಕಾಪ್ರಹಾರ ಮಾಡಿದರು.

ಪ್ರಶ್ನೆ ಇಷ್ಟೇ, ಸ್ವಾಮಿ: ಇಷ್ಟಕ್ಕೂ ಈ ಗೊಂದಲ ಸೃಷ್ಟಿಸಿದ್ದು ಯಾರು? ಮಾಧ್ಯಮಗಳೋ, ತಾವುಗಳೋ? ನವೆಂಬರ್‌ನಲ್ಲಿ ಕ್ರಾಂತಿಎಂದು ಕರೆ ನೀಡಿ, ಹೇಳಿಕೆಗಳ ಮೇಲೆ ಹೇಳಿಕೆ ಕೊಟ್ಟು, ಪಕ್ಷದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿದ್ದು ಪತ್ರಕರ್ತರಾ?

 "ಕೊಟ್ಟ ಮಾತು ಉಳಿಸಿಕೊಳ್ಳವವನು ನಿಜವಾದ ನಾಯಕ," "ಐದಾರು ಜನರ ಮಧ್ಯೆ ನಡೆದಿರುವ 'ವ್ಯಾಪಾರ'", "ಐದು ವರ್ಷ ನಾನೇ ಸಿಎಂ" ಎಂದೆಲ್ಲಾ ಬಹಿರಂಗ ಹೇಳಿಕೆಗಳ ಮೂಲಕ ಬಿಕ್ಕಟ್ಟು ಸೃಷ್ಟಿಸಿದ್ದು ಪತ್ರಕರ್ತರಾ?

ಶಕ್ತಿ ಪ್ರದರ್ಶನಕ್ಕೆಂದು ಶಾಸಕರ ಗುಂಪುಗಳನ್ನು ಕಟ್ಟಿಕೊಂಡು ತಂಡ ತಂಡವಾಗಿ ದೆಹಲಿಗೆ ಹೋಗಿ, ಗುಪ್ತ ಸಭೆಗಳನ್ನು ನಡೆಸಿದ್ದು ಪತ್ರಕರ್ತರಾ?

ಇವತ್ತು ರಾಜ್ಯದಲ್ಲಿ ಸೃಷ್ಟಿ ಆಗಿರುವ ಈ ಎಲ್ಲಾ ಗೊಂದಲಗಳಿಗೆ ಕಾರಣವೇನು ಗೊತ್ತೇ? ತಮ್ಮಿಬ್ಬರ ಒಣಪ್ರತಿಷ್ಠೆ, ಅಧಿಕಾರದ ಲಾಲಸೆ ಮತ್ತು ಶಾಸಕರ ಗುಂಪುಗಾರಿಕೆಯೇ ಕಾರಣವೇ ಹೊರತು, ನಿಮ್ಮ ನಾಟಕಗಳನ್ನು ವರದಿ ಮಾಡಿ ಸತ್ಯವನ್ನು ಬಿತ್ತರಿಸಿದ ಮಾಧ್ಯಮಗಳಲ್ಲ.

ಈ ತೋರಿಕೆಯ "ಏಕತೆಯ ಪ್ರದರ್ಶನ"ದ ಹಿಂದೆ ಎಲ್ಲರಿಗೂ ಸ್ಪಷ್ಟವಾಗಿ ಕಾಣುತ್ತಿರುವುದು ಬಿಡಿಸಲಾಗದ ಕಗ್ಗಂಟು ಮತ್ತು ಸಂಪೂರ್ಣವಾಗಿ ಒಡೆದ ಕನ್ನಡಿಯ ಚೂರುಗಳೇ ಹೊರತು, ಯಾವುದೇ ಪ್ರಾಮಾಣಿಕ ಮೈತ್ರಿಯಲ್ಲ. ಇದು ಕೇವಲ ಒಂದು ಕ್ಷಣಿಕ 'ಆಪ್ಟಿಕ್ಸ್' ಅಷ್ಟೇ ಎನ್ನುವುದು ಮಾತ್ರ ಗ್ಯಾರಂಟಿ ಎಂದು ಅಶೋಕ್ ವಂಗ್ಯ ಮಾಡಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!