ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿವೃದ್ಧಿಯ ಬಗ್ಗೆ ಮಾತನಾಡಿ ಪುಂಗಿ ಊದಿ ಹೋದರು ಎಂದು ಸಂಸದ ಗೋವಿಂದ ಎಂ. ಕಾರಜೋಳ ಟೀಕಿಸಿದರು.
ಚಿತ್ರದುರ್ಗದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯೂರು ಕನಕಪುರದಷ್ಟೇ ಮುಖ್ಯ ಎಂದು ಮುಖ್ಯಮಂತ್ರಿ ಹೇಳಿಕೊಂಡಿದ್ದಾರೆ. ಆದರೆ, ಉಪಚುನಾವಣೆ ಇಲ್ಲದಿದ್ದರೆ ಹಿರಿಯೂರಿಗೆ ಬರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ಬಿಜೆಪಿ ಸರ್ಕಾರ ಆರಂಭಿಸಿದ್ದು, ಹಿಂದಿನ ಬಿಜೆಪಿ ಆಡಳಿತದಲ್ಲಿ ಯೋಜನೆಗೆ ಹೆಚ್ಚಿನ ಅನುದಾನ ನೀಡಲಾಗಿತ್ತು. 2023ರಲ್ಲಿ ಬಜೆಟ್ನಲ್ಲಿ ₹5,500 ಕೋಟಿ ಅನುದಾನ ಒದಗಿಸಲಾಗಿತ್ತು. ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಒಟ್ಟು ₹11,223 ಕೋಟಿ ಅನುದಾನ ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನುದಾನ ಕಡಿಮೆಯಾಗಿದೆ ಎಂದು ಕಾರಜೋಳ ಆರೋಪಿಸಿದರು.




