Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೆಂಗು ಬೆಳೆಗಳ ಪುನಶ್ಚೇತನ : ಸಚಿವ ಮಲ್ಲಿಕಾರ್ಜುನ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತೆಂಗಿನ ತೋಟಗಳು ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಪುನಶ್ಚೇತನಗೊಳಿಸಲು ವೈಜ್ಞಾನಿಕವಾಗಿ ಸಾವಯವ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.


ವಿಧಾನಪರಿಷತ್ತಿನ ಕಲಾಪದ ವೇಳೆಯಲ್ಲಿ ಸದಸ್ಯ ರಮೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ತೆಂಗಿನ ತೋಟಗಳಲ್ಲಿ ವೈಜ್ಞಾನಿಕವಾಗಿ ಸಾವಯವ ಕೃಷಿಯನ್ನು ಅಳವಡಿಸಲು ಮೊದಲನೇ ಹಂತದಲ್ಲಿ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಎರಡು ಗುಚ್ಚಗಳನ್ನು ಗುರುತಿಸಲಾಗಿದೆ.

ಎರಡನೇ ಹಂತದಲ್ಲಿ ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ 10 ಗುಚ್ಚಗಳನ್ನು ಗುರುತಿಸಲಾಗುವುದು ಎಂದರು.

ತೋಟಗಾರಿಕೆಯಲ್ಲಿ ಸಾವಯವ ಕೃಷಿಯನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಗುಚ್ಚ ಮಾದರಿಯಲ್ಲಿ 640 ಹೆಕ್ಟೇರ್ ಪ್ರದೇಶದಲ್ಲಿ ಒಟ್ಟು 2 ಗ್ರಾಮ ಪಂಚಾಯಿತಿಯಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆಯಡಿ ಅಳವಡಿಸಿಕೊಳ್ಳಲಾಗಿದೆ ಎಂದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST