Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ: ಅಧ್ಯಕ್ಷ ಯು.ನಿಸಾರ್

Advertisement
Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಂವಿಧಾನಬದ್ಧವಾಗಿ ದೇಶದ ಅಲ್ಪಸಂಖ್ಯಾತರಿಗೆ ದೊರೆತಿರುವ ಕಾನೂನಾತ್ಮಕ ಹಕ್ಕುಗಳು ಮತ್ತು ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಹಾಗೂ ಅವರ ಹಿತರಕ್ಷಣೆ ಮಾಡಲು ರಾಜ್ಯ ಅಲ್ಪಸಂಖ್ಯಾತರ ಆಯೋಗವು ಸಂಪೂರ್ಣ ಬದ್ಧವಾಗಿದೆ ಎಂದು ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

 ಆಯೋಗಕ್ಕೆ ಸಿವಿಲ್ ನ್ಯಾಯಾಲಯದ ಮಾದರಿಯ ವಿಶೇಷ ಅಧಿಕಾರಗಳಿದ್ದು, ಅಲ್ಪಸಂಖ್ಯಾತ ಸಮುದಾಯದ ಯಾರಿಗೇ ಆದರೂ ಅನ್ಯಾಯವಾದಲ್ಲಿ ತಕ್ಷಣವೇ ಸಮನ್ಸ್ ಜಾರಿ ಮಾಡುವ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಶಕ್ತಿ ಇದೆ. ಸಮುದಾಯದಲ್ಲಿ ಸೌಹಾರ್ದತೆ ಹೆಚ್ಚಿಸುವುದು, ಶೈಕ್ಷಣಿಕ ಪ್ರಗತಿ, ಮಹಿಳಾ ಸಬಲೀಕರಣ ಹಾಗೂ ಕಾನೂನು ನೆರವು ನೀಡುವುದು ಆಯೋಗದ ಪ್ರಮುಖ ಉದ್ದೇಶಗಳಾಗಿವೆ. ಇದಕ್ಕಾಗಿ ಆಯೋಗದಲ್ಲಿ ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಹಿರಿಯ ಪತ್ರಕರ್ತರನ್ನೊಳಗೊಂಡ ವಿಶೇಷ ಉಪಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳು ಸಮುದಾಯದ ಸಮಸ್ಯೆಗಳ ಕುರಿತು ಆಳವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ಸೂಕ್ತ ಶಿಫಾರಸುಗಳನ್ನು ಸಲ್ಲಿಸಲಿವೆ ಎಂದು ಅಧ್ಯಕ್ಷ ಯು. ನಿಸಾರ್ ಅಹ್ಮದ್ ಅವರು ವಿವರಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಜುಲೈ 13 ರಂದು ರಾಜ್ಯ ಮಟ್ಟದ ಉನ್ನತ ಸಮಿತಿ ಸಭೆ ನಡೆಯಲಿದ್ದು, ಜಿಲ್ಲಾ ಮಟ್ಟದ ಪ್ರಗತಿ ವರದಿಗಳನ್ನು ಪರಿಶೀಲಿಸಲಾಗುವುದು. ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರಗತಿಯ ವರದಿಯನ್ನು ನಿಯಮಿತವಾಗಿ ಸಲ್ಲಿಸಲು ಆದೇಶಿಸಿದರು.

ಕುಟುಂಬಗಳ ಮಾಹಿತಿ ಕ್ರೂಢೀಕರಣಕ್ಕೆ ಸೂಚನೆ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಎಷ್ಟು ಕುಟುಂಬಗಳು ಇವೆ ಎಂಬ ನಿಖರವಾದ ಸಂಗ್ರಹಿಸಬೇಕು. ಕೇವಲ ಅಂಗನವಾಡಿಗೆ ಬರುವ ಮಕ್ಕಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುವುದಲ್ಲ
, ಬದಲಿಗೆ ಸಮಗ್ರ ಕುಟುಂಬಗಳ ಸರ್ವೆ ನಡೆಸುವುದು ಮುಖ್ಯ ಎಂದು ಅವರು ಅಧಿಕಾರಿಗಳಿಗೆ ಅಧ್ಯಕ್ಷ ಯು. ನಿಸಾರ್ ಅಹ್ಮದ್ ನಿರ್ದೇಶನ ನೀಡಿದರು.

ಕುಟುಂಬಗಳ ಸರ್ವೆ ನಡೆಸಿದಾಗ ಮಾತ್ರ 3 ರಿಂದ 6 ವರ್ಷದೊಳಗಿನ ಎಷ್ಟು ಮಕ್ಕಳಿದ್ದಾರೆ ಎಂಬ ನಿಖರ ಮಾಹಿತಿ ಲಭ್ಯವಾಗುತ್ತದೆ. ಆ ಮೂಲಕ ಮಕ್ಕಳಿಗೆ ಅಗತ್ಯವಿರುವ ಪೌಷ್ಟಿಕಾಹಾರ ಹಾಗೂ ಸೌಲಭ್ಯಗಳನ್ನು ತಲುಪಿಸಲು ಸಾಧ್ಯವಾಗುತ್ತದೆ.

ರಾಜ್ಯದಲ್ಲಿನ ಅಲ್ಪಸಂಖ್ಯಾತರ ಪೈಕಿ ಒಟ್ಟು ಮುಸ್ಲಿಮರಲ್ಲಿ ಶೇಕಡ 43.7 ರಷ್ಟು ಜನರು ಅನಕ್ಷರಸ್ಥರಾಗಿದ್ದಾರೆ. ಅಕ್ಷರಸ್ಥಾಗಿರುವ ಶೇಕಡ 56.3 ರಷ್ಟು ಜನರಲ್ಲಿ, ಎಸ್.ಎಸ್‍ಎಲ್.ಸಿ ವರೆಗೆ ವಿದ್ಯಾಭ್ಯಾಸ ಪೂರೈಸಿದವರ ಪ್ರಮಾಣ ಶೇಕಡ 6.3 ರಷ್ಟಿದೆ. ಅಂಗನಾಡಿಯಿಂದ 6 ವರ್ಷ ಪೂರೈಹಿಸಿದ ಯಾವ ಶಾಲೆ ದಾಖಲಾಗಿದೆ ಮಾಹಿತಿ ದೊರೆಯತ್ತಿಲ್ಲ. ಶಾಲಾ ಶಿಕ್ಷಣ ಇಲಾಖೆಯಲ್ಲಿ ದಾಖಲಾದ ಮಕ್ಕಳ ಪೈಕಿ ಅಲ್ಪಸಂಖ್ಯಾತ ಮಕ್ಕಳ ವಿವರ SಂಖಿS ನಲ್ಲಿ ಲಭ್ಯವಾಗುತ್ತದೆ. ಶಾಲೆಗೆ ದಾಖಲಾದವರ ವಿವರ ದೊರೆಯವುದಿಲ್ಲ. ಈ ಹಿನ್ನಲೆಯಲ್ಲಿ ಕುಟುಂಬಗಳ ವಿವರ ಸಂಗ್ರಹಿಸುವುದು ಅಗತ್ಯವಾಗಿದೆ ಎಂದರು.

ಅಂಗನವಾಡಿಗಳ ಆಧುನೀಕರಣ:
ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ಉತ್ತಮ ಸೌಲಭ್ಯ ಸಿಗಬೇಕೆಂಬ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕೇವಲ ಅಂಗನವಾಡಿಗಳ ಸುಧಾರಣೆಗಾಗಿ ಎರಡು ಹಂತಗಳಲ್ಲಿ ಒಟ್ಟಾರೆಯಾಗಿ ರೂ.350 ಕೋಟಿಗೂ ಅಧಿಕ ಬೃಹತ್ ಅನುದಾನವನ್ನು ಮಂಜೂರು ಮಾಡಿಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸಭೆಯಲ್ಲಿ ತಿಳಿಸಿದರು.

ಕೇವಲ ಗಣಿ ಬಾಧಿತ ಪ್ರದೇಶಗಳಷ್ಟೇ ಅಲ್ಲದೆ, ಪರೋಕ್ಷವಾಗಿ ಬಾಧಿತವಾಗಿರುವ ಇಡೀ ಜಿಲ್ಲೆಯ ವ್ಯಾಪ್ತಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೆಎಂಆರ್‍ಸಿ ಹಾಗೂ ಡಿಎಂಎಫ್ ನಿಧಿಯ ಬಳಕೆಯಿಂದಾಗಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಬಲ ಸಿಕ್ಕಿದೆ. ಜಿಲ್ಲೆಯ ಎಲ್ಲಾ 6 ತಾಲೂಕುಗಳ ಅಲ್ಪಸಂಖ್ಯಾತರ ವಸತಿ ನಿಲಯಗಳ ಸಮಗ್ರ ನವೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ.19 ಕೋಟಿ ಅನುದಾನ ಮೀಸಲಿಡಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಒಟ್ಟು ರೂ.3,200 ಕೋಟಿಗೂ ಅಧಿಕ ಅನುದಾನಕ್ಕೆ ಅನುಮೋದನೆ ತರಲಾಗಿದೆ ಎಂದರು.

ಬಾಲ್ಯ ವಿವಾಹ ತಡೆಗೆ ಕ್ರಮ:
ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಇಲಾಖೆಯ ವತಿಯಿಂದ ತಂಡಗಳನ್ನು ರಚಿಸಿ ಬಾಲ್ಯ ವಿವಾಹದ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 2428 ಅಂಗನವಾಡಿಗಳಿದ್ದು
, ಅದರಲ್ಲಿ 107 ಅಲ್ಪಸಂಖ್ಯಾತರ ಅಂಗನವಾಡಿಗಳಿವೆ. ಸರ್ಕಾರದ ಆದೇಶದಂತೆ 200 ಅಂಗನವಾಡಿಗಳನ್ನು ಎಲ್‍ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಲು ಮೇಲ್ದರ್ಜೆಗೆ ಏರಿಸಲಾಗಿದೆ. ಇದರಲ್ಲಿ 7 ಅಲ್ಪಸಂಖ್ಯಾತ ಅಂಗನವಾಡಿಗಳೂ ಸೇರಿವೆ. ಉತ್ತಮ ಕಟ್ಟಡ ಹಾಗೂ ಹೆಚ್ಚಿನ ಮಕ್ಕಳಿರುವ ಕಡೆ ಈ ಸೌಲಭ್ಯ ಕಲ್ಪಿಸಲಾಗಿದ್ದು, ಇಲಾಖೆಯಿಂದ ಅಗತ್ಯ ಪುಸ್ತಕಗಳನ್ನು ವಿತರಿಸಲಾಗಿದೆ. ಬಿಎಡ್, ಎಂಎ ಹಾಗೂ ಪದವಿ ಮುಗಿಸಿದ ಅರ್ಹ ಅಂಗನವಾಡಿ ಕಾರ್ಯಕರ್ತೆಯರಿಗೆ ಎನ್‍ಜಿಒ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಮೂಲಕ ವಿಶೇಷ ತರಬೇತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾಹಿತಿ ನೀಡಿದರು.

ಕೋಮು ಗಲಭೆಗೆ ಅವಕಾಶ ನೀಡಬೇಡಿ:
ಚಿತ್ರದುರ್ಗ ಜಿಲ್ಲೆ
, ಕೋಮು ಸೌಹಾರ್ದತೆಗೆ ಹೆಸರಾಗಿದೆ. ಸಾರ್ವಜನಿಕ ಆಚರಣೆ ಹಾಗೂ ಮೆರವಣಿಗೆಗಳ ವೇಳೆ ಪೆÇಲೀಸರು ಸೂಕ್ಷ್ಮ ಪ್ರದೇಶಗಲ್ಲಿ ಕಾವಲಿದ್ದು, ಕೋಮು ಗಲಭೆಗಳು ನಡೆಯದಂತೆ ತಡಯಬೇಕು. ಬಂದೋಬಸ್ತ್ ವೇಳೆ 15 ನಿಮಿಷ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿದರೆ ಯಾವುದೇ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದು ಅಧ್ಯಕ್ಷ ಯು. ನಿಸಾರ್ ಅಹ್ಮದ್ ಹೇಳಿದರು.

ಸರ್ಕಾರಿ ಶಾಲೆಗಳು ಅನೈತಿಕ ಚಟುವಟಿಕೆಗಳ ತಾಣಗಳಾಗದಂತೆ ಸುತ್ತಲೂ ಕಾಂಪೌಂಡ್ ನಿರ್ಮಿಸಿ ಸಿಸಿಟಿವಿ ಅಳವಡಿಸಬೇಕು. ಈ ಸ್ಥಳಗಳಲ್ಲಿ ಪೆÇಲೀಸರು ನಿರಂತರವಾಗಿ ಗತ್ತು ತಿರುಗಬೇಕು. ಮುಖ್ಯವಾಗಿ ಯುವಕರು ಮಾದಕ ವ್ಯಸನಗಳಿಗೆ ತುತ್ತಾಗದಂತೆ ಎಚ್ಚರ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆಯನ್ನು ನಿಬರ್ಂಧಿಸಲಾಗುತಿದೆ. ಕಳೆದ ವರ್ಷ ಏನ್.ಡಿ.ಪಿ.ಎಸ್ ಕಾಯ್ದೆಯಡಿ 95 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ 97 ಪ್ರಕರಣಗಳನ್ನು ದಾಖಲಿಸಲಾಗಿದ್ದು ಮಾದಕ ವಸ್ತುಗಳ ತಡೆಗೆ ತೀವ್ರ ಕಾರ್ಯಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರ ತಿಳಿಸಿದರು.

ಮೇಳ ಆಯೋಜಿಸಲು ಸೂಚನೆ:
ಅಲ್ಪಸಂಖ್ಯಾತರು ಹೆಚ್ಚಿರುವ ಕಡೆ ಕಾರ್ಮಿಕ
, ಕೌಶಲ ಅಭಿವೃದ್ಧಿ, ವಿಕಲಚೇತನರ ಕಲ್ಯಾಣ, ಉದ್ಯೋಗ ವಿನಿಮಯ ಕಚೇರಿ ಸೇರಿದಂತೆ ಹಲವಾರು ಇಲಾಖೆ ಸರ್ಕಾರಿ ಯೋಜನಗಳ ಕುರಿತು ಮೇಳ ಆಯೋಜಿಸಿ ಮಾಹಿತಿ ನೀಡಬೇಕು. ಮಾರುಕಟ್ಟೆ ಬೇಡಿಕಗೆ ಅನುಗುಣವಾಗಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಯೋಜನೆ ರೂಪಿಸಬೇಕು. ವಸತಿ ಯೋಜನೆ ಅಡಿ ಗ್ರಾಮಗಳಲ್ಲಿ ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳು ಲಭ್ಯವಿಲ್ಲದಿದ್ದರೆ, ಯೋಜನೆಯನ್ನು ಮಾರ್ಪಡಿಸಿ ತಾಲೂಕಿನ ಬೇರೆ ಭಾಗದ ಫಲಾನುಭವಿಗೆ ನೀಡಬೇಕು. ಬ್ಯಾಂಕುಗಳು ವಿನಾಕಾರಣ ಶಿಕ್ಷಣ, ಉದ್ಯೋಗ ಸಾಲದ ಅರ್ಜಿಗಳನ್ನು ತಿರಸ್ಕರಿಸಬಾರದು ಎಂದು ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಹೇಳಿದರು.

ಸಭೆಯಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರ, ಜಿಲ್ಲಾ ಪಂಚಾಯಿತಿ ಸಿಪಿಓ ಗಾಯತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನ ವ್ಯವಸ್ಥಾಪಕ ಪ್ರಸನ್ನ ಕುಮಾರ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಖಾ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಅಲ್ಪಸಂಖ್ಯಾತರ ಆಯೋಗದ ಸದಸ್ಯರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.