Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಮನಗರದಿಂದಲೇ ಸ್ಪರ್ಧೆ ಖಚಿತ: ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದ ನಿಖಿಲ್!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾನು ರಾಮನಗರ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಸಂಪೂರ್ಣ ಖಚಿತ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದು ಪುನರುಚ್ಚರಿಸಿದ್ದಾರೆ. ಕಳೆದ ಚುನಾವಣೆಯ ಸೋಲಿನ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಲ್ಲಿ ಇನ್ನೂ ಮಾಸಿಲ್ಲದಿರುವುದನ್ನು ಸ್ಮರಿಸಿದ ಅವರು, ಮುಂಬರುವ ದಿನಗಳಲ್ಲಿ ಉತ್ತಮ ಫಲಿತಾಂಶ ತರುವ ಮೂಲಕ ಆ ನಿರಾಶೆಯನ್ನು ಹೋಗಲಾಡಿಸಿ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವುದಾಗಿ ತಿಳಿಸಿದ್ದಾರೆ.

Advertisement

ರಾಮನಗರದಿಂದಲೇ ಕಣಕ್ಕೆ: "ನಾನು ಬೇರೆ ಎಲ್ಲಿಗೂ ಹೋಗುವುದಿಲ್ಲ, ಇಲ್ಲಿನ ಜನರನ್ನೇ ನಂಬಿದ್ದೇನೆ. ರಾಮನಗರದಿಂದ ಸ್ಪರ್ಧಿಸುವುದು ನೂರಕ್ಕೆ ನೂರು ಖಚಿತ" ಎಂದು ನಿಖಿಲ್ ಕುಮಾರಸ್ವಾಮಿ ದೃಢಪಡಿಸಿದ್ದಾರೆ.

ನಾಲ್ಕೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವಿನ ಗುರಿ: ರಾಮನಗರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡುವ ಬಲವಾದ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ವಾಪಸ್‌ಕುರಿತು: ಕೇಂದ್ರ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಕುರಿತು ಮಾತನಾಡಿ, "ಅವರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಅವರು ಯಾವ ಸಂದರ್ಭದಲ್ಲಿ ವಾಪಸ್ ಬರಬೇಕು ಎಂಬುದನ್ನು ಬಿಜೆಪಿ ನಾಯಕರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ" ಎಂದು ತಿಳಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರ ಈ ಸ್ಪಷ್ಟನೆಯು ರಾಮನಗರ ಜೆಡಿಎಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಹಾಗೂ ಸಂಚಲನಕ್ಕೆ ಕಾರಣವಾಗಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ