Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಿ

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯಲ್ಲಿ ಕೈಗೊಂಡಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವ   ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.


        ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ   ರೈಲ್ವೆ   ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಹೊಸದಾಗಿ ಮಂಜೂರಾದ ರೈಲ್ವೆ ಯೋಜನೆಗಳನ್ನು ಮಾರ್ಚ್ ೨೫ರೊಳಗಾಗಿ ಕೈಗೆತ್ತಿಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಡಿ.ರಾಮಪುರ ಗೇಟ್, ಬಡ್ಡಿಹಳ್ಳಿ ಗೇಟ್, ದೊಡ್ಡನಕೆರೆ ಸೇರಿ ಮತ್ತಿತರ ರೋಡ್ ಅಂಡರ್ ಬ್ರಿಡ್ಜ್(ಖUಃs) ಹಾಗೂ ಬೆನಚಗೆರೆ ಗೇಟ್, ಹಿಂಡಿಸ್ಕೆರೆ ಗೇಟ್, ಶಾರದಾ ನಗರ, ಬಿದರೆಗುಡಿ ಗೇಟ್, ನಂದಿಹಳ್ಳಿ ಗೇಟ್ ಸೇರಿ ಇತರೆ ರೋಡ್ ಓವರ್ ಬ್ರಿಡ್ಜ್(ಖಔಃs) ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲೇ ಕೈಗೊಂಡು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದರು.

         ಜಿಲ್ಲೆಯ ಹೊನ್ನವಳ್ಳಿ, ಬೆಣ್ಣೆಗೆರೆಯಲ್ಲಿ ಕೈಗೊಂಡಿರುವ ಲೆವೆಲ್ ಕ್ರಾಸಿಂಗ್ ಕಾಮಗಾರಿ ಶೇ.೯೦ರಷ್ಟು ಪೂರ್ಣಗೊಂಡಿದೆ.  ರೈಲ್ವೆ ಯೋಜನೆಗಳ ಕಾಮಗಾರಿಗಳನ್ನು ಮಳೆಯಿಂದ ತೊಂದರೆಯಾಗದಂತೆ ನಿರ್ಮಾಣ ಮಾಡಬೇಕು.  ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಯೋಜನೆಗಳನ್ನು ಚುರುಕುಗೊಳಿಸಬೇಕು.   ಯಾವುದೇ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ನನ್ನ ಗಮನಕ್ಕೆ ತರಬೇಕೆಂದರಲ್ಲದೆ ಈ ರೈಲ್ವೆ ಅಭಿವೃದ್ಧಿ ಯೋಜನೆಗಳಿಂದ ಪ್ರಾದೇಶಿಕ ಸಾರಿಗೆ ಸಂಪರ್ಕ ವ್ಯವಸ್ಥೆಗಳು   ಸುಧಾರಿಸುವುದರಿಂದ  ವೇಗವಾಗಿ ಪೂರ್ಣಗೊಳಿಸಲು ಸೂಚಿಸಿದರು.

        ತುಮಕೂರು ತಾಲೂಕಿನ ಹೆಗ್ಗೆರೆ ಲೆವೆಲ್ ಕ್ರಾಸಿಂಗ್ ನಿರ್ಮಾಣಕ್ಕೆ ಅಡ್ಡಿಯಾಗಿರುವ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದ ನಂತರ ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲಿಸಿದರು.

        ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುಮಕೂರು ಗ್ರಾಮೀಣ ಶಾಸಕ ಸುರೇಶ್ ಗೌಡ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ   ಅಮಿತೇಶ ಕುಮಾರ್ ಸಿಂಹ, ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ   ಆಶುಟೋ? ಮಾತುರ್, ಮುಖ್ಯ ಇಂಜಿನಿಯರ್(ನಿರ್ಮಾಣ)   ಸರೋಜ್ ಕುಮಾರ್ ಬನ್‌ವಾಲ್,   ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ,   ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಬಿ.ವಿ., ಮತ್ತಿತರ ಅಧಿಕಾರಿಗಳು ಸಭೆಗೆ ಹಾಜರಿದ್ದರು. 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ