Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts Chitradurga

ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಖಂಡನೆ: ಸಾರ್ವಜನಿಕ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

​ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ನೀಡಿರುವ ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಹೇಳಿಕೆಯನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದವೀಧರರ ವಿಭಾಗ ತೀವ್ರವಾಗಿ ಖಂಡಿಸಿದೆ.

​ಕಾಂಗ್ರೆಸ್ ನಾಯಕರನ್ನು ತುಂಡುತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತೇವೆ ಎಂಬರ್ಥದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರು ನೀಡಿರುವ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದದ್ದು ಎಂದು ಜಿಲ್ಲಾಧ್ಯಕ್ಷ ಪ್ರಕಾಶ್ ರಾಮನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನಾಭಿಪ್ರಾಯಗಳಿಗೆ ಸೈದ್ಧಾಂತಿಕ ಮತ್ತು ರಾಜಕೀಯವಾಗಿ ಉತ್ತರ ನೀಡಬೇಕೇ ಹೊರತು, ಬೆದರಿಕೆ ಹಾಗೂ ಹಿಂಸೆಯ ಭಾಷೆಯನ್ನು ಬಳಸುವುದು ರಾಜಕಾರಣಿಗೆ ಶೋಭೆ ತರುವುದಿಲ್ಲ. ದ್ವೇಷ ಹಾಗೂ ಹಿಂಸೆಗೆ ಪ್ರಚೋದನೆ ನೀಡುವ ಬದಲು ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಬೆಳೆಸಲು ಜನಪ್ರತಿನಿಧಿಗಳು ಶ್ರಮಿಸಬೇಕು. ಕತ್ತಿ ಹಾಗೂ ಹಲ್ಲೆಯ ಮಾತುಗಳ ಮೂಲಕ ರಾಜಕೀಯ ವಾತಾವರಣವನ್ನು ಕಲುಷಿತಗೊಳಿಸಬಾರದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಕಾಂಗ್ರೆಸ್ ಪಕ್ಷಕ್ಕೆ ಹೋರಾಟ, ತ್ಯಾಗ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳ ಇತಿಹಾಸವಿದೆ. ಇಂತಹ ಬೆದರಿಕೆಗಳಿಗೆ ಕಾಂಗ್ರೆಸ್ ಎಂದಿಗೂ ಹೆದರುವುದಿಲ್ಲ. ಛಲವಾದಿ ನಾರಾಯಣಸ್ವಾಮಿ ಅವರು ತಕ್ಷಣವೇ ತಮ್ಮ ಹೇಳಿಕೆಯನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಹಾಗೂ ಬಿಜೆಪಿ ನಾಯಕತ್ವ ಈ ವಿಷಯದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಪ್ರಕಾಶ್ ರಾಮನಾಯಕ್ ಆಗ್ರಹಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ಕನ್ನಡ ಮನಸ್ಸುಗಳನ್ನು ಕಟ್ಟುವ ಕೆಲಸ ಆಗಬೇಕು: ಶಿವಾನಂದ ತಗಡೂರು 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ 10 ವರ್ಷ ಜೈಲು, ₹6.84 ಲಕ್ಷ ದಂಡಬಸ್ ಪ್ರಯಾಣ ಹಾಗೂ ಹಾಲು ದರ ಏರಿಕೆ ಸಮರ್ಥಿಸಿಕೊಂಡ ಸಿಎಂ ಡಿಕೆಶಿ: ಕೇಂದ್ರ ಸರ್ಕಾರ ಇಂಧನ ಬೆಲೆ ಇಳಿಸಿದರೆ ಬಸ್ ದರವೂ ಕಡಿತಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಖಂಡನೆ: ಸಾರ್ವಜನಿಕ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹಕಾಂಗ್ರೆಸ್‌ನಿಂದ ಸಾಂವಿಧಾನಿಕ ಸಂಸ್ಥೆಗಳಿಗೆ ಅಪಮಾನ, ದೇಶಹಿತದ ಚಿಂತನೆ ಇಲ್ಲ: ಹರೀಶ್ ದ್ವಿವೇದಿ ಕಿಡಿ​ಪ್ರಿಯಕರನಿಂದಲೇ ಯುವತಿ ಭೀಕರ ಕೊಲೆ; ನಾಪತ್ತೆ ನಾಟಕವಾಡಿದ ಖಾಕಿ!​ ರಾಜ್ಯ ಸಾರಿಗೆ ಬಸ್ ದರ ಭಾರಿ ಏರಿಕೆ: ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಟಿಕೆಟ್ ಬೆಲೆ ಹೆಚ್ಚಳ, ಮಧ್ಯರಾತ್ರಿಯಿಂದಲೇ ಜಾರಿಅಮೆರಿಕ ಮಧ್ಯಂತರ ಚುನಾವಣೆ ಫಲಿತಾಂಶ: ‘ಭಾರತದಲ್ಲೂ ಇದೇ ಬದಲಾವಣೆ ಶೀಘ್ರ’ಐಪಿಎಸ್ ಅಧಿಕಾರಿ ಬಿ.ಎಸ್ ಧನುಷ್ ಕುಮಾರ್ ವಿರುದ್ಧ ಕನ್ನಡಿಗರ ಆಕ್ರೋಶ: ಬೇಷರತ್ ಕ್ಷಮೆಗೆ ಆಗ್ರಹ