Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ-ಕೃಷ್ಣಾ ಭಾಗದ ರೈತರ ಬಾಳಿಗೆ ಕೊಳ್ಳಿ ಇಟ್ಟ ಕಾಂಗ್ರೆಸ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡಿಗರಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ತನ್ನ ಮಿತ್ರ ಪಕ್ಷ ಡಿಎಂಕೆ ಯನ್ನು ಓಲೈಸಲು ತಮಿಳುನಾಡಿಗೆ ನೀರು ಹರಿಯ ಬಿಟ್ಟು ಕಾವೇರಿ ತೀರದ ನಮ್ಮ ರೈತರ ಬದುಕಿಗೆ ಕೊಳ್ಳಿಯಿಟ್ಟಿತ್ತು
, ಇದೀಗ ಕೃಷ್ಣಾ ತೀರದ ನಮ್ಮ ರೈತರ ಪರಿಶ್ರಮದ ಬೆವರಿನ ಬೆಳೆಗಳನ್ನು ಒಣಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪ ಮಾಡಿದರು.

ಮಾನವೀಯತೆಯ ಹೆಸರಿನಲ್ಲಿ ತೆಲಂಗಾಣ ರಾಜ್ಯಕ್ಕೆ 1.5 ಟಿಎಂಸಿ ಯಷ್ಟು ನೀರು ಬಿಡಲಾಗಿದೆ ಎಂದು ಹೇಳಿರುವ ಸಚಿವ ಎಂ.ಬಿ ಪಾಟೀಲ್ ಅವರಿಗೂ ತಿಳಿಯದಂತೆ 10 ಟಿಎಂಸಿ ನೀರು ಹರಿಯಬಿಡಲಾಗಿದೆ ಎಂದರೆ ಈ ನೀರು ಬಿಟ್ಟಿರುವ ಹಿಂದಿನ ಆದೇಶದ ಕಾಣದ ಕೈಗಳು ಯಾವುವು? ಕರ್ನಾಟಕ ಸರ್ಕಾರವನ್ನು ಯಾರು ನಿಯಂತ್ರಿಸುತ್ತಿದ್ದಾರೆ? ಜಲಸಂಪನ್ಮೂಲ ಇಲಾಖೆ ಸರ್ವಾಧಿಕಾರಿಯ ಮುಷ್ಠಿಯಲ್ಲಿದೆಯೇ? ಕರ್ನಾಟಕದ ಜಲ ಸಂಪತ್ತು, ಅರಣ್ಯ ಸಂಪತ್ತು ಹಾಗೂ ಪ್ರಾಕೃತಿಕ ಸಂಪತ್ತುಗಳ ಮೇಲೆ ನಿಯಂತ್ರಣ ಸಾಧಿಸಿರುವ ಕಾಂಗ್ರೆಸ್ ವರಿಷ್ಠ ಮಂಡಳಿ ಕರ್ನಾಟಕದ ನದಿಗಳಿಂದ ಹರಿಯುವ ನೀರನ್ನು ತನ್ನ ಮಿತ್ರ ಪಕ್ಷಗಳು ಹಾಗೂ ತನ್ನ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ಹರಿಯ ಬಿಡುವಂತೆ ಸೂಚನೆ ನೀಡುತ್ತಿದೆ ಎಂದು ವಿಜಯೇಂದ್ರ ಹರಿಹಾಯ್ದಿದ್ದಾರೆ.

ರಾಜ್ಯದ ಮಣ್ಣಿನ ಮಕ್ಕಳ ಆಕ್ರೋಶ ಅದರಲ್ಲೂ ಉತ್ತರ ಕರ್ನಾಟಕದ ಕೃಷ್ಣಾ ತೀರದ ರೈತರು ಬೆವರು ಹರಿಸಿ ಬೆಳೆದಿರುವ ಬೆಳೆಗಳು ಈಗಾಗಲೇ ಒಣಗುತ್ತಿವೆ. ಇದರಿಂದ ಕಂಗಾಲಾಗಿರುವ ರೈತರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಈ ಕಾರಣಕ್ಕಾಗಿಯೇ ಓರ್ವ ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತ ರೈತನ ಆತ್ಮಕ್ಕೆ ಶಾಂತಿ ಕೋರಿ ಆ ಮೃತ ರೈತನ ಕುಟುಂಬದ ಪರವಾಗಿ ಬಿಜೆಪಿ ದನಿಯೆತ್ತಿಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಕೂಡಲೇ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಬೆಳೆ ನಷ್ಟದ ಪರಿಹಾರ ನೀಡಬೇಕೆಂದು ಒತಾಯಿಸುತ್ತೇನೆ. ರಾಜ್ಯ ಸರ್ಕಾರ ತೆಲಂಗಾಣಕ್ಕೆ 10 ಟಿಎಂಸಿ ನೀರು ಬಿಟ್ಟಿರುವುದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದ್ದು ಈ ನಿಟ್ಟಿನಲ್ಲಿ ಕರ್ನಾಟಕ ಬಿಜೆಪಿ ಈ ಭಾಗದ ರೈತರ ಪರವಾಗಿ ಹೋರಾಟವನ್ನು ಕೈಗೆತ್ತಿಕೊಳ್ಳಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST